#ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ರಾಜ್ಯ ಸರ್ಕಾರ ಆದೇಶ ಬೆಂಗಳೂರು: ಹಬ್ಬ-ಹರಿದಿನಗಳನ್ನು ಬದಿಗಿಟ್ಟು ಸಾರ್ವಜನಿಕರ ರಕ್ಷಣೆಗಾಗಿ ದುಡಿಯುವ ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ಇಲಾಖೆಯು ಭರ್ಜರಿ ಸಿಹಿ ಸುದ್ದಿಯನ್ನ ನೀಡಿದೆ. ಇನ್ನು ಮುಂದೆ ಪೊಲೀಸ್ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದೊಂದಿಗೆ ಕಾಲ ಕಳೆಯಲು ಅನುಕೂಲವಾಗುವಂತೆ ಸಾಂದರ್ಭಿಕ ರಜೆ ನೀಡುವಂತೆ ಕರ್ನಾಟಕ ಸರ್ಕಾರವು ಮಹತ್ವದ ಆದೇಶ ಹೊರಡಿಸಲಾಗಿದೆ.