WPL 2026- ಡೆಲ್ಲಿ ಕ್ಯಾಪಿಟಲ್ಸ್ ಸಾಮೂಹಿಕ ತಪ್ಪಿಗೆ ನಾಯಕಿ ಜೆಮಿಮಾ ರೋಡ್ರಿಗಸ್ ಗೆ 12 ಲಕ್ಷ ರೂ ಬರೆ! ಏನು ಕಾರಣ
Fine To Jemimah Rodrigues - ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಕೇವಲ 3 ರನ್ ಗೆ ಪರಾಭವ ಅನುಭವಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ನಾಯಕಿ ಜೆಮಿಮಾ ರೋಡ್ರಿಗಸ್ ಅವರಿಗೆ ನಿಧಾನಗತಿಯ ಓವರ್ರೇಟ್ನಿಂದ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಗುಜರಾತ್ ಜೈಂಟ್ಸ್ ವಿರುದ್ಧದ ಸೋಲಿನಿಂದ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಯುಪಿ ವಾರಿಯರ್ಸ್ ವಿರುದ್ಧ ನಡೆಯಲಿರುವ ಕೊನೆಯ ಲೀಗ್ ಪಂದ್ಯ ಡೆಲ್ಲಿ ಪ್ಲೇ-ಆಫ್ ಪ್ರವೇಶದ ನಿಟ್ಟಿನಲ್ಲಿ ನಾಕೌಟ್ ಪಂದ್ಯವಾಗಿ ಮಾರ್ಪಟ್ಟಿದೆ.