ಆರಾಧ್ಯ creation
4.6K views
15 days ago
#💔BREAKING : ಮಾಜಿ ಶಾಸಕ , 'ಹೃದಯಾಘಾತದಿಂದ' ನಿಧನ😟💔 ಮೈಸೂರು: ಮಾಜಿ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಮಾಜಿ ಅಧ್ಯಕ್ಷ ಆರ್‌.ವಿ. ದೇವರಾಜ್‌ (67) ಅವರು ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಬುಧವಾರ ಜನ್ಮದಿನ ಇದ್ದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದರ್ಶನ ಪಡೆಯಲು ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ.ಸೋಮವಾರ ರಾತ್ರಿ ಮೈಸೂರಿನಲ್ಲಿ ನಿಧನರಾದ ಕಾಂಗ್ರೆಸ್ ಮುಖಂಡ ಆರ್‌.ವಿ. ದೇವರಾಜ್‌ (67), ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಜನಿಸಿ ಅಲ್ಲೇ ಜೀವನ ಕಟ್ಟಿಕೊಂಡು ಕೊನೆಯವರೆಗೂ ತಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ ಮಹಾನ್‌ ನಾಯಕ. ಕಾಂಗ್ರೆಸ್‌ ಪಕ್ಷದ ಶಿಸ್ತಿನ ಸಿಪಾಯಿ. 1957 ರಲ್ಲಿ ಜನಿಸಿದ ಅವರು 3 ಬಾರಿ ಶಾಸಕ, ಒಂದು ಬಾರಿ ಪರಿಷತ್ ಸದಸ್ಯರಾಗಿದ್ದರು. 2004ರಲ್ಲಿ ಅವರು ಚಾಮರಾಜಪೇಟೆ ಕ್ಷೇತ್ರವನ್ನು ಎಸ್.ಎಂ. ಕೃಷ್ಣ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟು ಸುದ್ದಿ ಮಾಡಿದ್ದರು. #🆕ಲೇಟೆಸ್ಟ್ ಅಪ್ಡೇಟ್ಸ್ 📰 #😞 ಮೂಡ್ ಆಫ್ ಸ್ಟೇಟಸ್ #📰ಇಂದಿನ ಅಪ್ಡೇಟ್ಸ್ 📲

More like this