꯭̽♔︎꯭꯭꯭꯭❥꯭𝐆꯭꯭꯭𝝾꯭꯭꯭֟፝͠𝗺𝗯꯭꯭𝝴༐꯭꯭꯭🦋̲͟
24.5K views
3 months ago
#📢ಶಾಲಾ ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ😲 ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸುವ ಸಲುವಾಗಿ, ಸರ್ಕಾರಿ ಮತ್ತು ಅನುದಾನಿತ (Aided) ಶಾಲೆಗಳ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ ಸಂಘದಿಂದ ಸಿಎಂ ಭೇಟಿ ಮಾಡಿ ಸರ್ಕಾರದ ಜಾತಿ ಸಮೀಕ್ಷೆ ಮತ್ತು ಶಾಲೆಗೆ ಹಾಜರಾಗಿ ಪಾಠ ಬೋಧನೆ ಮಾಡುವುದು ಎರಡೂ ಕೆಲಸಗಳು ಹೊರೆ ಆಗಲಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಒಂದು ಕೆಲಸಕ್ಕೆ ನಿಯೋಜನೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದರು. ಶಿಕ್ಷಕರ ಸಂಘದ ಮನವಿ ಸ್ವೀಕರಿಸಿದ ಬೆನ್ನಲ್ಲಿಯೇ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮೀಕ್ಷಾ ಕಾರ್ಯದಲ್ಲಿ ಹೆಚ್ಚಿನ ಶಿಕ್ಷಕರು ತೊಡಗಿಸಿಕೊಂಡಿರುವುದರಿಂದ ದಸರಾ ರಜೆಯ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯವು ಸೆಪ್ಟೆಂಬರ್ 22 ರಿಂದ ಆರಂಭಗೊಂಡಿತ್ತು. ಇದನ್ನು ಅಕ್ಟೋಬರ್ 7 ರೊಳಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ, ಸಮೀಕ್ಷೆಯ ಪ್ರಗತಿ ನಿರೀಕ್ಷಿಸಿದಷ್ಟು ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ರಾಜ್ಯದಾದ್ಯಂತ ನಮ್ಮ ನಿರೀಕ್ಷೆಗೆ ತಕ್ಕಂತೆ ಸರ್ವೇ ಪೂರ್ಣಗೊಂಡಿಲ್ಲ. ಕೊಪ್ಪಳದಂತಹ ಕೆಲವು ಜಿಲ್ಲೆಗಳಲ್ಲಿ ಶೇ. 97ರಷ್ಟು ಪ್ರಗತಿ ಸಾಧಿಸಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಶೇ. 60ರಷ್ಟು ಮಾತ್ರ ಆಗಿದೆ. ಅಕ್ಟೋಬರ್ 7 ಕೊನೆಯ ದಿನವಾಗಿದ್ದರೂ, ಎಲ್ಲ ಜಿಲ್ಲೆಗಳಲ್ಲಿ ಸಂಪೂರ್ಣ ಸರ್ವೇ ಪೂರ್ಣವಾಗುವುದು ಅಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.