ShareChat
click to see wallet page
#📜ಪ್ರಚಲಿತ ವಿದ್ಯಮಾನ📜 ಸ್ವಸಹಾಯ ಸಂಘಗಳ ನಿರ್ವಹಣೆಯ ಅಕ್ಕ ಕಫೆ ಉದ್ಘಾಟನೆ ತರಕಾರಿ ಹೆಚ್ಚಿ ಅಡುಗೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧಾರವಾಡ: ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಹೇಳಿದರು. ಜಿಲ್ಲಾ ಪಂಚಾಯತ ಹತ್ತಿರವಿರುವ ಕಟ್ಟಡದಲ್ಲಿ ಕಬ್ಬೆನೂರು ಗ್ರಾಮದ ಕಾಮದೇನು ಮಹಿಳಾ ಸ್ವಸಹಾಯ ಸಂಘ ಆರಂಭಿಸಿರುವ ಅಕ್ಕ-ಕಫೆ ಉದ್ಘಾಟಿಸಿ, ಮಾತನಾಡಿದರು. ಸದರಿ ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿದೆ. ಈ ನಿಟ್ಟಿನಲ್ಲಿ ಅಭಿಯಾನದಡಿ ಸ್ವಸಹಾಯ ಗುಂಪುಗಳ ಮಹಿಳೆಯರೆ ನಿರ್ವಹಿಸಲು ಅವಕಾಶವಾಗುವಂತೆ ಅಕ್ಕ-ಕಫೆ ರೂಪಿಸಲಾಗಿದ್ದು, ಮಹಿಳೆಯರ ಆರ್ಥಿಕ ಸಬಲಿಕರಣಕ್ಕೆ ಇದು ದೊಡ್ಡ ಕೊಡುಗೆ ನೀಡಲಿದೆ ಎಂದರು. ಮಹಿಳೆಯರನ್ನು ಸ್ವಸಹಾಯ ಗುಂಪುಗಳಡಿ ಸಂಘಟಿಸಿ, ಅವರಿಗೆ ಕೃಷಿ ಮತ್ತು ಕೃಷಿಯೇತರ ವಿಭಾಗಗಳಡಿ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಒದಗಿಸುವುದರ ಜೊತೆಗೆ ಅವರು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿ ಪಥದೊಂದಿಗೆ ಸ್ವಾವಲಂಬನೆಯ ಜೀವನವನ್ನು ನಿರ್ವಹಿಸುವಲ್ಲಿ ನಿರಂತರ ಬೆಂಬಲ ನೀಡಲಾಗುತ್ತಿದೆ ಎಂದರು. ಪ್ರಮುಖವಾಗಿ ಮಹಿಳೆಯರು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಂಡು ಜೀವನೋಪಾಯದೊಂದಿಗೆ ಸಬಲೀಕರಣದ ಬದುಕನ್ನು ರೂಪಿಸಿಕೊಳ್ಳುವಲ್ಲಿ ಅವಶ್ಯಕ ಸಾಮಥ್ರ್ಯಾಭಿವೃದ್ಧಿ ತರಬೇತಿಗಳನ್ನು ಏರ್ಪಡಿಸಿ, ಪ್ರತಿಯೊಬ್ಬ ಮಹಿಳೆಯನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸೂಕ್ತ ಅವಕಾಶಗಳನ್ನು ಕಲ್ಪಿಸಿ ನಿರಂತರವಾಗಿ ಸರ್ಕಾರ ಶ್ರಮಿಸುತ್ತಿದೆ ಎಂದರು. ಮಹಿಳೆಯರ ಜೀವನೋಪಾಯ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವಲ್ಲಿ ರಾಜ್ಯ ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಅಕ್ಕ-ಕಫೆ ಕಾರ್ಯಕ್ರಮವನ್ನು ಘೋಷಿಸಿದೆ. ಸರ್ಕಾರದ ಆದೇಶದಂತೆ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲು ಮಹಿಳೆಯರೇ ನಡೆಸುವ 50 ಕೆಫೆ ಸಂಜೀವಿನಿ (ಅಕ್ಕ ಕೆಫೆ) ಕ್ಯಾಂಟೀನ್‍ಗಳನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ. ಅದರಂತೆ ಧಾರವಾಡ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಾನ ಮತ್ತು ಎಲ್ಲ ತಾಲೂಕು ಕೇಂದ್ರ ಸ್ಥಾನಗಳಲ್ಲಿ ಅಕ್ಕ ಕೆಫೆಯನ್ನು ಆರಂಭಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ನವಲಗುಂದ ಶಾಸಕರಾದ ಎನ್. ಎಚ್.ಕೋನರಡ್ಡಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ್ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಜಿ.ಪಂ. ಸಿಇಓ ಭುವನೇಶ ದೇವಿದಾಸ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ ಆರ್ಯ, ಪ್ರೋಬೆಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಹಾಗೂ ಕಾಮದೇನು ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ರಾಜಶ್ರೀ ಮಂಜುನಾಥ ಪವಾಡಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿವಿಧ ಸ್ವಸಹಾಯ ಸಂಘಗಳ ಸದಸ್ಯೆಯರು, ಸಾರ್ವಜನಿಕರು ಹಾಜರಿದ್ದರು. ಅಕ್ಕ ಕೆಫೆ: ಅಕ್ಕ ಕೆಫೆ ಕಾರ್ಯಕ್ರಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಕಾರ್ಯಕ್ರಮದ ಮುಖ್ಯ ಉದ್ದೇಶವು ಮಹಿಳಾ ಸ್ವ-ಸಹಾಯ ಸಂಘಗಳಿಗೆ ಆಹಾರ ಪೂರೈಕೆ ಕ್ಷೇತ್ರದಲ್ಲಿ ಸುಸ್ಥಿರ ಜೀವನೋಪಾಯ ಚಟುವಟಿಕೆಯನ್ನು ಒದಗಿಸುವುದಾಗಿದೆ. ಪ್ರಮುಖವಾಗಿ ಈ ಅಕ್ಕ ಕೆಫೆ ಚಟುವಟಿಕೆಯಡಿ ಉತ್ತಮ ಗುಣಮಟ್ಟದ ಶುಚಿ-ರುಚಿ ಪೌಷ್ಠಿಕ ಆಹಾರವನ್ನು ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಪೂರೈಸುವ ದೂರದೃಷ್ಠಿಯೊಂದಿಗೆ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಎರಡು ಅಕ್ಕ ಕೆಫೆಗಳ ಸ್ಥಾಪನೆಗಾಗಿ ಸ್ಥಳ ಗುರುತಿಸಿ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಅದು ಅನುಮೋದನೆಗೊಂಡು ಅನುದಾನ ಬೀಡುಗಡೆಯಾಗಿದೆ. ಸದರಿ ಕೆಫೆ ಅನುಷ್ಠಾನಕ್ಕಾಗಿ ಜಿಲ್ಲಾ ಹಂತದಲ್ಲಿ ಜಂಟಿ ನಿರ್ದೇಶಕರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆರವರ ಅಧ್ಯಕ್ಷತೆಯಲ್ಲಿ, 7 ಜನರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಸದರಿ ಸಮಿತಿ ನಿರ್ಣಯದಂತೆ ಆಸಕ್ತ ಸ್ವ-ಸಹಾಯ ಸಂಘಗಳ ಆಯ್ಕೆಗಾಗಿ ಪ್ರಕಟಣೆ ಹೊರಡಿಸಿ, ಸರ್ಕಾರದ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ. ನಂತರ ಆಯ್ಕೆ ಗೊಂಡ ಸ್ವ-ಸಹಾಯ ಸಂಘಗಳಿಗೆ ಪಾಕ ಪ್ರಾವಿಣ್ಯತೆ, ಶುಚಿತ್ವ, ನೈರ್ಮಲ್ಯ, ನಾಯಕತ್ವ, ನಿರ್ವಹಣೆ ಕುರಿತು ತರಬೇತಿ ನೀಡಲಾಗುತ್ತದೆ. #Inauguration #AkkaCafe #run #SelfHelpGroups #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat

More like this