IND vs SA: ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ನಿಂದ ಗಿಲ್ ಔಟ್! ಬದಲಾವಣೆ ಖಚಿತ - AIN Kannada
ಭಾರತ ಮತ್ತು ಸೌತ್ ಆಫ್ರಿಕಾ ನಡುವೆ ನಡೆಯುವ ದ್ವಿತೀಯ ಟೆಸ್ಟ್ ಪಂದ್ಯ ನವೆಂಬರ್ 22ರಿಂದ ಗುವಾಹಟಿಯ ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಈ ನಿರ್ಣಾಯಕ ಪಂದ್ಯಕ್ಕೆ ಟೀಮ್ ಇಂಡಿಯಾಗೆ ದೊಡ್ಡ ಹೊಡೆತ ಬಿದ್ದಿದೆ. ನಾಯಕ ಶುಭ್ಮನ್ ಗಿಲ್ ತಂಡದಿಂದ ಹೊರಗುಳಿದಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ವೇಳೆ ಗಿಲ್ ಕುತ್ತಿಗೆ ನೋವಿನಿಂದ ಬಳಲಿದ್ದು, ದ್ವಿತೀಯ ಇನಿಂಗ್ಸ್‌ಗೆ ಕಣಕ್ಕಿಳಿಯಲಿಲ್ಲ. ಇದೀಗ ವೈದ್ಯಕೀಯ ಪರಿಶೀಲನೆಯ ನಂತರ ಗಿಲ್‌ಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದು,