ShareChat
click to see wallet page
#🌼 ಗಾಂಧಿ ಜಯಂತಿ 🌼 ಗಾಂಧೀಜಿ ಭಾರತಕ್ಕೆ ರಾಜಕೀಯ ಸ್ವಾತಂತ್ರ್ಯ ತಂದುಕೊಟ್ಟರು: ಎನ್.ಎಚ್.ಕೋನರಡ್ಡಿ ಧಾರವಾಡ: ಗಾಂಧೀಜಿಯವರು ಸತ್ಯ, ಸ್ವಚ್ಛತೆ ಮತ್ತು ಗ್ರಾಮ ಸ್ವರಾಜ್ಯದ ಸಂಕಲ್ಪಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಭಾರತಕ್ಕೆ ರಾಜಕೀಯ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಶಾಸಕ ಎನ್.ಎಚ್ ಕೋನರಡ್ಡಿ ಹೇಳಿದರು. ಧಾರವಾಡ ಹೊಸ ಬಸ್ ನಿಲ್ದಾಣದ ಹತ್ತಿರವಿರುವ ನೂತನ ಗಾಂಧಿ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗಾಂಧೀಜಿ ಅವರ ರಾಜಕೀಯ ಆಡಳಿತ ವ್ಯವಸ್ಥೆ ನಮಗೆ ಮಾದರಿಯಾಗಿದೆ. ಸತ್ಯ ಮತ್ತು ಅಹಿಂಸೆ ಮಾರ್ಗದಲ್ಲಿ ಅವರು ನಡೆದರು. ಸತ್ಯಾಗ್ರಹ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ಗ್ರಾಮ ಸ್ವರಾಜ್ಯದ ಸಂಕಲ್ಪ ಹಾಗೂ ಅಧಿಕಾರ ವೀಕೇಂದ್ರಿಕರಣ ವ್ಯವಸ್ಥೆಗೆ ಬುನಾದಿ ಹಾಕಿದರು. ಪ್ರಜಾಪ್ರಭುತ್ವ ಗಟ್ಟಿಯಾಗಲು ಗ್ರಾಮ ವ್ಯವಸ್ಥೆ ಮುಖ್ಯ. ಆರ್ಥಿಕ, ಸಾಮಾಜಿಕ ಸಮಾನತೆಗೆ ಮುಂದಾಗಬೇಕು ಎಂದರು. ಗಾಂಧಿ ಚರಿತ್ರೆಯಲ್ಲಿ 1924ರ ಬೆಳಗಾವಿ ಅಧಿವೇಶನ ಅತಿದೊಡ್ಡ ಮೈಲಿಗಲ್ಲಾಗಿದೆ. ಗಾಂಧಿ ತತ್ವವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಸರ್ವಧರ್ಮದ ಗುರುಗಳು ಭಾಗವಹಿಸಿದ ಸಮಾರಂಭ ಇದಾಗಿದೆ. ದೇಶ ಒಂದು ಎಂಬ ಭಾವನೆಯಲ್ಲಿ ನಾವು ಮುನ್ನೆಡಯಬೇಕು. ಗಾಂಧಿ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ. ಇಂದು ವಿಜಯದಶಮಿ ಹಬ್ಬವನ್ನು ಆಚರಿಸುತ್ತಿದ್ದೇವೆ. ಹುಬ್ಬಳ್ಳಿ ಧಾರವಾಡ ಬೃಹತ್ ಬೆಂಗಳೂರು ಮಾದರಿಯಲ್ಲಿ ಬೆಳವಣಿಗೆಯಾಗಬೇಕು ಎಂದರು. #Gandhiji #brought #political #freedom #India #NHKonaraddy #malgudiexpress #malgudinews #news #TopNews
🌼 ಗಾಂಧಿ ಜಯಂತಿ 🌼 - ShareChat

More like this