#😱2 ಲಕ್ಷ ಗೃಹಲಕ್ಷ್ಮಿಯರಿಗೆ ಶಾಕ್ ಕೊಟ್ಟ ಸರ್ಕಾರ! ಕಾರಣ ಇಲ್ಲಿದೆ ನೋಡಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದ ಎರಡು ಲಕ್ಷಕ್ಕೂ ಹೆಚ್ಚು ಮಹಿಳೆಯರ ಹೆಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಫಲಾನುಭವಿಗಳ ಪಟ್ಟಿಯಿಂದ ತೆಗೆದುಹಾಕಿದೆ. ಇವರ ಪತಿ ಅಥವಾ ಪತ್ನಿಯವರು ಆದಾಯ ತೆರಿಗೆ (Income Tax) ಪಾವತಿಸುತ್ತಿರುವುದು ಅಥವಾ ಸರಕು ಮತ್ತು ಸೇವಾ ತೆರಿಗೆ (GST) ರಿಟರ್ನ್ಸ್ ಸಲ್ಲಿಸುತ್ತಿರುವುದು ಮುಖ್ಯ ಕಾರಣವಾಗಿದೆ.
