#☔ಇನ್ನೂ 5 ದಿನದವರೆಗೆ ಭಾರೀ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ!⛈️ ಕರ್ನಾಟಕದಲ್ಲಿ ಇನ್ನೂ 5 ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇಂದಿನಿಂದ 5 ದಿನಗಳವರೆಗೆ ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆಯಾಗುತ್ತೆ ಎಂದು ತಿಳಿಸಿದೆ ಹವಾಮಾನ ಇಲಾಖೆ. ಕೆಲವು ಜಿಲ್ಲೆಗಲ್ಲಿ ಗುಡುಗು ಸಹಿತ ವರುಣ ಅಬ್ಬರಿಸಲಿದ್ದಾನೆ.
ಕರಾವಳಿ ಕರ್ನಾಟಕದಲ್ಲಿ ಇಂದಿನಿಂದ ಭಾರಿ ಮಳೆ ಮತ್ತು ಬಲವಾದ ಗಾಳಿಯೊಂದಿಗೆ ಚಂಡಮಾರುತದ ಸಾಧ್ಯತೆಯಿದೆ, ವಿಶೇಷವಾಗಿ ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ 50-60 ಕಿಮೀ/ಗಂಟೆಯ ವೇಗದ ಗಾಳಿ ಮತ್ತು ಮಧ್ಯಮ ಮಳೆ ಮುಂದುವರಿಯಲಿದೆ.
ಮೀನುಗಾರರಿಗೆ ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 4ರವರೆಗೆ ಚದುರಿದ ಮಳೆಯಾಗಿ, 5-9 ಮಿಮೀ ಮಳೆಯ ಸಾಧ್ಯತೆಯಿದ್ದು, ತಾಪಮಾನ 30°C ಗರಿಷ್ಠ ಮತ್ತು 24°C ಕನಿಷ್ಠದ ಸುತ್ತಲಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರು ಮಳೆಯಿಂದ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ಹಲವು ಪ್ರದೇಶಗಳಲ್ಲಿ ಮನೆ, ಮಠಗಳೆಲ್ಲವೂ ಮುಳುಗಡೆಯಾಗಿದ್ದು, ಜಾನುವಾರುಗಳು ಕೊಚ್ಚಿಹೋಗಿವೆ. ಬಾಗಲಕೋಟೆ, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ.
