ಧರ್ಮಸ್ಥಳದಲ್ಲಿ ಸಿಕ್ಕ ಬುರುಡೆಗಳು ಯಾರದ್ದು? FSL ವರದಿಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ - Ain Kannada
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ಚಿನ್ನಯ್ಯ ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.4ರಂದು ಪ್ರಕರಣ ದಾಖಲಾದ ಬಳಿಕ ಈ ವಿಚಾರ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ದೊಡ್ಡಮಟ್ಟದ ಪರ- ವಿರೋಧ ಅಭಿಪ್ರಾಯಗಳು, ಚರ್ಚೆಗಳನ್ನೂ ಹುಟ್ಟುಹಾಕಿದೆ. ಇದೀಗ ಬುರುಡೆ ಮತ್ತು ಮೂಳೆಗಳ ಗುರುತು ಕುರಿತು ಪತ್ತೆ ಸಂಬಂಧ ತನಿಖೆ ಮುಂದುವರಿದಿದೆ. ಈ ಹಿಂದೆ, ಮಹಿಳೆಯರು ಮತ್ತು ಯುವತಿಯರ ಶವಗಳನ್ನು ಹೂತುಹಾಕಲಾಗಿದೆ ಎಂಬ ಆರೋಪವಿತ್ತು. ಆದರೆ, ವಿಶೇಷ ತನಿಖಾ ದಳ