#📜ಪ್ರಚಲಿತ ವಿದ್ಯಮಾನ📜
28 ರಾಜ್ಯ ಸರ್ಕಾರಗಳಿಗೆ ಒಟ್ಟಾರೆ 1,01,603 ಕೋಟಿ ರೂ. ತೆರಿಗೆ ಹಂಚಿಕೆ
ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಪಾಲನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಎಲ್ಲಾ ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ.
ದೀಪಾವಳಿ ಹಬ್ಬಗಳ ಋತುವಿನಲ್ಲಿ ಕೇಂದ್ರ ಸರ್ಕಾರ ಮಹತ್ತರ ನಿರ್ಣಯ ಕೈಗೊಂಡು ಎಲ್ಲಾ ರಾಜ್ಯಗಳಿಗೂ ನೆರವಾಗುವಂತೆ ತೆರಿಗೆ ಹಂಚಿಕೆಯ ಒಂದು ಮುಂಗಡ ಕಂತು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 3705 ಕೋಟಿ ರೂ. ಹೆಚ್ಚುವರಿ ತೆರಿಗೆ ಪಾಲನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಮರ್ಪಕವಾಗಿ ರಾಜ್ಯಗಳು ಬಳಸಿಕೊಳ್ಳಲಿ: ರಾಜ್ಯಗಳ ಬಂಡವಾಳ ವೆಚ್ಚವನ್ನು ವೇಗಗೊಳಿಸಲು ಹಾಗೂ ಅಭಿವೃದ್ಧಿ ಕಲ್ಯಾಣ ಕಾರ್ಯಗಳ ವೆಚ್ಚಕ್ಕೆ ಆರ್ಥಿಕ ನೆರವು ಒದಗಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರ ದೇಶದ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಒಟ್ಟಾರೆ 1,01,603 ಕೋಟಿ ರೂ. ತೆರಿಗೆ ಹಂಚಿಕೆಯನ್ನು ಮುಂಗಡ ಕಂತಾಗಿ ಬಿಡುಗಡೆ ಮಾಡಲಾಗಿದೆ.
ಅಕ್ಟೋಬರ್ 10ರಂದು ಬಿಡುಗಡೆ ಆಗಬೇಕಾದ ಸಾಮಾನ್ಯ ಮಾಸಿಕ ಹಂಚಿಕೆ ಜೊತೆಗೆ ಈ ಹೆಚ್ಚುವರಿ ತೆರಿಗೆ ಪಾಲಿನ ಹಣವೂ ಬಿಡುಗಡೆಯಾಗಲಿದೆ. ರಾಜ್ಯ ಸರ್ಕಾರಗಳು ಅಭಿವೃದ್ಧಿ ಕಾರ್ಯಗಳಿಗೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲಿ ಎಂದು ಅವರು ಸಲಹೆ ನೀಡಿದ್ದಾರೆ.
ರೈತರಿಗೆ ಬೆಂಬಲ ಬೆಲೆ ತಲುಪಿಸಿ: ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ತತ್ತರಿಸಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಾಂತ ವಿಪರೀತ ಮಳೆಯಿಂದ ರೈತರು ಬೆಳೆಹಾನಿಗೆ ಒಳಗಾಗಿದ್ದಾರೆ. ಈ ಸಂಕಷ್ಟ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆಯ ನೆರವು ಕಲ್ಪಿಸಿದೆ. ರಾಜ್ಯ ಸರ್ಕಾರ ಅನ್ನದಾತರಿಗೆ ಇದನ್ನು ಸಮರ್ಪಕವಾಗಿ ತಲುಪಿಸಲಿ ಎಂದು ಒತ್ತಾಯಿಸಿದ್ದಾರೆ.
ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅಕ್ಟೋಬರ್ 1 ರಂದು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 10ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ 81,735 ಕೋಟಿ ರೂ.ಗಳ ತೆರಿಗೆ ಪಾಲನ್ನು ಬಿಡುಗಡೆ ಮಾಡಿದೆ.
#Total #tax #allocation #crore #state #governments #gst #malgudiexpress #malgudinews #news #TopNews
