ShareChat
click to see wallet page
#📜ಪ್ರಚಲಿತ ವಿದ್ಯಮಾನ📜 ದಸರಾ ಯಾವುದೇ ಅಡಚಣೆಗಳಿಲ್ಲದೇ ನಡೆದಿರುವುದು ಸಂತಸ ತಂದಿದೆ: ಸಿದ್ದರಾಮಯ್ಯ ಮೈಸೂರು: ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದರು. ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳು ಎಂದರು. ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಸುಮಾರು 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ ಎಂದರು. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲಬುರಗಿಯ ಭೇಟಿ ಸಂದರ್ಭದಲ್ಲಿ ತಿಳಿಸಿದ್ದು, ಸರ್ಕಾರ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17,000 ರೂ., ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31,000 ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು ಎಂದರು. #Happy #Dasara #tookplace #disruptions #Siddaramaiah #Dasara2025 #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat

More like this