ShareChat
click to see wallet page
#📜ಪ್ರಚಲಿತ ವಿದ್ಯಮಾನ📜 ನೇರಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ ಬೆಂಗಳೂರು: ಕೃಷಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ (BTM) ಹುದ್ದೆ-1 ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) - 02 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆ ಆತ್ಮ ಯೋಜನಾ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ (BTM) ಹುದ್ದೆಗೆ MSC. Agri / Allied Subject ಪದವಿಯೊಂದಿಗೆ ಕನಿಷ್ಠ 02 ವರ್ಷಗಳ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಹಿಸಿದ ಅನುಭವ ಹೊಂದಿರಬೇಕು. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) - ಹುದ್ದೆಗೆ BSC. Agri / Allied Subject ಪದವಿಯೊಂದಿಗೆ ಕನಿಷ್ಠ01 ವರ್ಷಗಳ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಹಿಸಿದ ಅನುಭವ ಹೊಂದಿರಬೇಕು. ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಸೂಕ್ತ ದಾಖಲೆಗಳನ್ನು ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೃಷಿ ಸಂಕೀರ್ಣ, ಎಸ್.ಕರಿಯಪ್ಪ ರಸ್ತೆ (ಕನಕಪುರ ರಸ್ತೆ) ಬನಶಂಕರಿ, ಬೆಂಗಳೂರು -560 070 ಇಲ್ಲಿ ಅಕ್ಟೋಬರ್ 24, 2025 ರೊಳಗೆ ಕಚೇರಿಯ ಅವಧಿಯೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-26711594 ಗೆ ಸಂಪರ್ಕಿಸಬಹುದು. #Applications #invited #fillingup #vacant #posts #direct #contractbasis #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ೧೦೦' 8 Soqe నిరగుత్తిగి ఆధారద EXPRESS EMPLOMEN ಮೇಲೆ ಖಾಲಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ coupotiom 000 ಆಹ್ವಾನ CARRER work HS WI = ೧೦೦' 8 Soqe నిరగుత్తిగి ఆధారద EXPRESS EMPLOMEN ಮೇಲೆ ಖಾಲಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ coupotiom 000 ಆಹ್ವಾನ CARRER work HS WI = - ShareChat

More like this