ಅಂಗಕ್ಕೆ ಬಡತನವಲ್ಲದೆ ಮನಕ್ಕೆ ಬಡತನವುಂಟೆ??? ಬೆಟ್ಟ ಬಲ್ಲಿತ್ತೆಂದಡೆ, ಉಳಿಯ ಮೊನೆಯಲ್ಲಿ ಬಡತನವಿದ್ದಡೆ ಒಡೆಯದೆ??? ಘನಶಿವಭಕ್ತರಿಗೆ ಬಡತನವಿಲ್ಲ ಸತ್ಯರಿಗೆ ದುಷ್ಕರ್ಮವಿಲ್ಲ. ಎನಗೆ ಮಾರಯ್ಯಪ್ರಿಯ ಅಮಲೇಶ್ವರಲಿಂಗವುಳ್ಳನ್ನಕ್ಕ ಆರ ಹಂಗಿಲ್ಲ ಮಾರಯ್ಯಾ.. ✍️ ಆಯ್ದಕ್ಕಿ ಲಕ್ಕಮ್ಮನವರ ವಚನ..
"ಹಾಗದ ಕಾಯಕವ ಮಾಡಿ, ಹಣವಡ್ಡವ ತಾ ಎಂಬಲ್ಲಿ ಸತ್ಯದ ಕಾಯಕ ಉಂಟೆ??? ಭಕ್ತರಲ್ಲಿ ಕಾಯಕಕ್ಕೆ ಕಡಿಮೆಯಾಗಿ ತಾ ಎಂಬುದು ಅಮರೇಶ್ವರಲಿಂಗಕ್ಕೆ ಚಿತ್ತಶುದ್ಧದ ಕಾಯಕ.. ✍️ ಆಯ್ದಕ್ಕಿ ಮಾರಯ್ಯನವರ ವಚನ.. #ವಚನಗಳು #ಬಸವಾದಿ ಶರಣ ಶರಣೆಯರು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಶರಣ ಸಾಹಿತ್ಯ
