ಕನ್ನಡ ಕಿರುತೆರೆ ಹಾಗೂ ಹಿರಿತೆರೆ ನಟ ಶ್ರಿರಾಮ್ ಅವರ ವಿವಾಹ ನೆರವೇರಿದೆ. ಸ್ಫೂರ್ತಿ ಎಂಬುವವರ ಜೊತೆ ಶ್ರೀರಾಮ್ ವಿವಾಹ ಆಗಿದ್ದಾರೆ. ಭಾನುವಾರ (ನವೆಂಬರ್ 30) ಅವರು ಸಪ್ತಪದಿ ತುಳಿದಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶ್ರೀರಾಮ್ ಅವರದ್ದು ಲವ್ ಮ್ಯಾರೇಜ್ ಅಲ್ಲ. ಇದೊಂದು ಪಕ್ಕಾ ಅರೇಂಜ್ ಮ್ಯಾರೆಜ್ ಎನ್ನಲಾಗುತ್ತಿದೆ. ಮೈಸೂರಿನಲ್ಲಿ ಇವರ ವಿವಾಹ ನೆರವೇರಿದೆಯಂತೆ. ಶ್ರೀರಾಮ್ ಮದುವೆ ಫೋಟೋಗಳು ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಸಾಮಾನ್ಯವಾಗಿ ವಿವಾಹ ಆಗುವಾಗ ಹುಡುಗಿ ಚಿತ್ರರಂಗದವರಲ್ಲದೆ ಇದ್ದರೆ ಸೆಲೆಬ್ರಿಟಿಗಳು ಅವರ ಕಿರುಪರಿಚಯ ಮಾಡಿಕೊಡುತ್ತಾರೆ. ಆದರೆ, ಶ್ರೀರಾಮ್ ಅವರು ಸದ್ಯಕ್ಕೆ ಆ ರೀತಿ ಮಾಡಿಲ್ಲ. ಅವರು ತಾವು ಕೈ ಹಿಡಿದ ಹುಡುಗಿಯ ಹಿನ್ನೆಲೆಯನ್ನು ಇನ್ನಷ್ಟೇ ತಿಳಿಸಬೇಕಿದೆ. #❤️ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡದ ಖ್ಯಾತ ನಟ😍

