ShareChat
click to see wallet page
#📜ಪ್ರಚಲಿತ ವಿದ್ಯಮಾನ📜 ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನ ಚಿತ್ರದುರ್ಗ: ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ 2025-26ನೇ ಸಾಲಿನಲ್ಲಿ ಕೃಷಿಯಲ್ಲಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಹಾಗೂ ಜಿಲ್ಲೆಯಲ್ಲಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲ ಪಡಿಸಲು ವೈಯಕ್ತಿಕ ಫಲಾನುಭವಿಗಳಿಗೆ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿಯ ರೈತರಿಂದ ಕಂಬೈನ್ಸ್ ಹಾರ್ವೆಸ್ಟರ್ ಹಬ್ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಬಿ. ಮಂಜುನಾಥ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸಾಮಾನ್ಯ ಘಟಕದಡಿ ವೈಯಕ್ತಿಕ ಫಲಾನುಭವಿಗಳಿಗೆ (ಎರಡು). ವಿಶೇಷ ಘಟಕ ಯೋಜನೆ ವರ್ಗದ ರೈತರಿಗೆ (ಒಂದು) ಘಟಕ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಹೈಟೆಕ್ ಹಾರ್ವೆಸ್ಟರ್ ಹಬ್ಗಎಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡರ್ ಮಾದರಿಯಲ್ಲಿ ಸ್ಥಾಪಿಸುವುದು. ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗುವುದು. ಈ ಸಹಾಯಧನವನ್ನು ಕ್ರೆಡಿಟ್ ಲಿಂಕ್ಸ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಬಿಡುಗಡೆ ಮಾಡಲಾಗುವುದು. ಆಯ್ಕೆಯಾದ ಫಲಾನುಭವಿಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿದೆ. ಅರ್ಜಿಗಳನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅಕ್ಟೋಬರ್ 8 ರೊಳಗಾಗಿ ಸಲ್ಲಿಸುವುದು. ಸಹಾಯಕ ಕೃಷಿ ನಿರ್ದೇಶಕರು ಸ್ವೀಕೃತವಾಗುವ ಎಲ್ಲ ಅರ್ಜಿಗಳನ್ನು ಮೇಲ್ಕಂಡ ಎಲ್ಲ ಅಂಶಗಳನ್ವಯ ಪರಿಶೀಲಿಸಿ ಸಂಬಂಧಿಸಿದ ಉಪ ಕೃಷಿ ನಿರ್ದೇಶಕರ ಮುಖಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ. ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು. #Invitation #applications #establishment #HiTech #HarvesterHub #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ೧೦೦' 8 Soqe ಹೈಟಿಕ್ ಹಾರ್ವೆಸ್ಟರ್ EXPRESS EMPLOMEN ಹಬ್ ಸ್ಥಾಪನೆಗಾಗಿ ಆಹ್ವಾನ ಅರ್ಜಿ coupotionm 000 CARRER work HS WI = ೧೦೦' 8 Soqe ಹೈಟಿಕ್ ಹಾರ್ವೆಸ್ಟರ್ EXPRESS EMPLOMEN ಹಬ್ ಸ್ಥಾಪನೆಗಾಗಿ ಆಹ್ವಾನ ಅರ್ಜಿ coupotionm 000 CARRER work HS WI = - ShareChat

More like this