ShareChat
click to see wallet page
search
#📜ಪ್ರಚಲಿತ ವಿದ್ಯಮಾನ📜 ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ: ಎಚ್ ಡಿ ಕುಮಾರಸ್ವಾಮಿ ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಗುಂಪು ಘರ್ಷಣೆಯಲ್ಲಿ ಹಾರಿದ ಗುಂಡಿನಿಂದ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಯ ಕುರಿತು ಸ್ಪೋಟಕ ಮಾಹಿತಿಯನ್ನು ಬಹಿರಂಗ ಮಾಡಿದರು. ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ.ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. ಸ್ವಪಕ್ಷದ ಕಾರ್ಯಕರ್ತನ ಕೊಲೆಯನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರಕಾರ ಇನ್ನಿಲ್ಲದ ಪ್ರಯತ್ನ ನಡೆಸಿದೆ. ಇದು ನಾಚುಗೇಡು. ಅದಕ್ಕಾಗಿ ಆ ನತದೃಷ್ಟ ಕಾರ್ಯಕರ್ತನ ಮೃತದೇಹವನ್ನು ಎರಡು ಬಾರಿ ಮರಣೋತ್ತರ ಪರೀಕ್ಷೆಗೆ ಒಳಡಿಸಲಾಗಿದೆ ಎಂದು ಗಂಭೀರ ಆರೋಪಿಸಿದರು. ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ಏನು ಫಲಿತಾಂಶ ಹೊರಬಂತು? ಎರಡನೇ ಮರಣೋತ್ತರ ಪರೀಕ್ಷೆಯಲ್ಲಿ ಏನು ಮಾಹಿತಿ ಇದೆ? ಎಂಬುದನ್ನು ಸರಕಾರ ಹೇಳಬೇಕು. ನನಗೆ ಬಂದಿರುವ ಮಾಹಿತಿ ಪ್ರಕಾರ ರಾಜಶೇಖರ ಅವರ ದೇಹವನ್ನು ಎರಡು ಸಲ ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಎಂದರು. 2ನೇ ಬಾರಿ ಪೋಸ್ಟ್ ಮಾರ್ಟಮ್ ಯಾಕೆ ಮಾಡಿದಿರಿ? 2ನೇ ಬಾರಿ ಪೋಸ್ಟ್ ಮಾರ್ಟಮ್ ಮಾಡಲಿಕ್ಕೆ ಯಾರು ಒತ್ತಡ ಹೇರಿದರು? ಮತ್ತೊಂದು ಬಾರಿ ಪರೀಕ್ಷೆಗೆ ಯಾರು ಆದೇಶ ಮಾಡಿದರು? ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ತಮಗೆ ಅನುಕೂಲಕರ ವರದಿ ಬರಲಿಲ್ಲ ಎಂದು ಅಲ್ಲಿಗೆ 'ಸೂರ್ಯನ ಬೆಳಕು' ಏನಾದರೂ ಬಿದ್ದಿತ್ತಾ? ಎಂದು ಪ್ರಶ್ನಿಸಿದರು. ನೀವು ಸತ್ಯವಂತರಲ್ಲವೇ? ದಿನನಿತ್ಯ ಜಾಹೀರಾತುಗಳಲ್ಲಿ 'ಸತ್ಯಮೆಯ ಜಯತೇ' ಎಂದು ಕೊಚ್ಚಿಕೊಳ್ಳುತ್ತೀರಿ. ಈಗ ಸತ್ಯ ಹೇಳಿ. ರಾಜ್ಯದ ಜನತೆಗೆ ಸತ್ಯ ಏನೆಂದು ತಿಳಿಸಬೇಕಲ್ಲವೇ? ಎರಡನೇ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ ಎಂಬುದನ್ನು ಹೇಳಿ? ಮುಖ್ಯಮಂತ್ರಿಗಳೇ ಜನತೆಗೆ ಸತ್ಯವನ್ನು ಹೇಳಿ ಎಂದು ಆಗ್ರಹಿಸಿದರು. ಮೊದಲ ಮರಣೋತ್ತರ ಪರೀಕ್ಷೆಯಲ್ಲಿ ದೇಹದಲ್ಲಿ ಸಣ್ಣಪುಟ್ಟ ಚೂರು ಪತ್ತೆಯಾಯಿತು ಎಂಬ ಮಾಹಿತಿ ಇದೆ. ಎರಡನೇ ಶವ ಪರೀಕ್ಷೆಯನ್ನು ಮಾಡಿಸುವ ಮೂಲಕ ಸ್ವತಃ ಜನಾರ್ದನ ರೆಡ್ಡಿ ಅವರೇ ಗುಂಡು ಹೊಡೆದಿದ್ದು ಆರೋಪ ಮಾಡಿ ಕಥೆ ಅವರನ್ನು ಫಿಕ್ಸ್ ಮಾಡಲು ಷಡ್ಯಂತ್ರ್ಯ ಮಾಡಿದ್ದಾರೆ. ಆದರೆ, ಎರಡನೇ ಮರಣೋತ್ತರ ಪರೀಕ್ಷೆ ಈ ಸರಕಾರಕ್ಕೆ, ಸೂರ್ಯನ ಬೆಳಕು ಬೀಳಿಸಲು ಹೋದವರಿಗೆ ಉಲ್ಟಾ ಹೊಡೆದಿದೆ ಎಂದರು. ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ಹೀಗೆ ಹೀಗೆ ಆಗಿದೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ. ನಮ್ಮ ಪಕ್ಷ ಶಾಸಕ ಭರತ್ ರೆಡ್ಡಿ ಪರ ನಿಲ್ಲುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳುತ್ತಾರೆ. ಸತೀಶ್‌ರೆಡ್ಡಿ ಗನ್ ಮ್ಯಾನ್ ಗನ್‌ನಿಂದ ಫೈಯರ್ ಆಗಿದೆ ಅಂತ ಸ್ವತಃ ಸಿಎಂ ಅವರೇ ಹೇಳಿದ್ದಾರೆ. ಆದರೆ ಗೃಹ ಸಚಿವರು ಆತನ ಬಂಧನಕ್ಕೆ ಆದೇಶ ಮಾಡದೇ ಹೇಳಿಕೆಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಹೀಗಿರುವಾಗ ಈ ಸರ್ಕಾರ ಯಾವ ರೀತಿ ತನಿಖೆ ಮಾಡುತ್ತದೆ? ಇವರ ತನಿಖೆಯಿಂದ ಸತ್ಯಾಂಶ ಹೊರಕ್ಕೆ ಬರಲು ಸಾಧ್ಯವೇ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿ ಬಳ್ಳಾರಿ ಶೂಟೌಟ್ ಪ್ರಕರಣಕ್ಕೆ ಸಮಾಧಿ ಕಟ್ಟಲು ಹೊರಟಿದ್ದಾರೆ. ಜನಾರ್ದನ ರೆಡ್ಡಿ ಅವರು ಭದ್ರತೆ ಕೊಡಿ ಎಂದು ಕೇಂದ್ರದ ಗೃಹ ಸಚಿವರಿಗೆ ಪತ್ರ ಬರೆದರೆ ಅದನ್ನು ಈ ಡಿಸಿಎಂ ಲೇವಡಿ ಮಾಡುತ್ತಾರೆ. ಬೇಕಾದರೆ ಅಮೆರಿಕ, ಇರಾನ್‌‌ನಿಂದ ಭದ್ರತೆ ಮಾಡಿಸಿಕೊಳ್ಳಲಿ ಅಥವಾ ನೂರು ಜನ ಬಿಜೆಪಿ ಕಾರ್ಯಕರ್ತರನ್ನು ಭದ್ರತೆಗೆ ನಿಯೋಜಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಬಾಯಲ್ಲಿ ಬರುವ ಮಾತೇ ಇದು ಎಂದು ಪ್ರಶ್ನಿಸಿದರು. #attempt #made #coverup #death #Congress #worker #HDKumaraswamy #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat