ShareChat
click to see wallet page
search
#📜ಪ್ರಚಲಿತ ವಿದ್ಯಮಾನ📜 ನರೇಗಾ ಬಗ್ಗೆ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಯಲಿದೆ: ಸಿದ್ದರಾಮಯ್ಯ ಬೆಂಗಳೂರು: ಜನವರಿ 22ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ (MGNREGA) ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು. ದೆಹಲಿಗೆ ಭೇಟಿ ನೀಡುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ವರಿಷ್ಠರು ಕರೆ ನೀಡಿದರೆ ದೆಹಲಿಗೆ ತೆರಳುತ್ತೇನೆ ಎಂದರು. ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ, ಅಮಾನತ್ತುಗೊಳಿಸಲಾಗಿದೆ ಎಂದರು. #special #discussion on #MNREGA #joint #session #Siddaramaiah #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat