ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
"ಅಜಿತ್ ಪವಾರ್ (Ajit Pawar) ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.