"ಆಚಾರವೆಂಬುದು ಆಗೋಚರ ನೋಡಯ್ಯಾ, ಆರಿಗೆಯೂ ಸಾಧ್ಯವಲ್ಲ. ಮತ್ರ್ಯಲೋಕದಲ್ಲಿ ಆ ಸದಾಚಾರದ ಬೆಳವಿಗೆಯ ಮಾಡಲೆಂದು ಬಸವಣ್ಣ ಬಂದು ಭಕ್ತಿಸ್ಥಲವ ಹರಹಿದ. ಗುರು ಲಿಂಗ ಜಂಗಮ ದಾಸೋಹ ಪಾದೋದಕ ಪ್ರಸಾದದ ಹಾದಿಯನೆಲ್ಲರಿಗೆ ತೋರಿದ. ಶಿವಾಚಾರವ ಬೆಳವಿಗೆಯ ಘನವನಹುದಲ್ಲವೆಂದು ಬಿಜ್ಜಳ ತರ್ಕಿಸಲು, ಅನಂತ ಮುಖದಿಂದ ಒಡಂಬಡಿಸಿ ಅಹುದೆನಿಸಿದ. ಬಂದ ಮಣಿಹ ಪೂರೈಸಿತ್ತೆಂದು ಲಿಂಗದೊಳಗೆ ಬಗಿದು ಹೊಕ್ಕಡೆ, ಹಿಂದೆ??? ಈಲೋಕವರಿದು ಬದುಕಬೇಕೆಂದು ಸೆರಗ ಕೊಟ್ಟ. ನಾನು ಹಿಂದುಳಿದಹಳೆಂದು ಮುಂದಣ ಗತಿಯ ತೋರಿ, ಬಸವಣ್ಣಪ್ರಿಯ ಚೆನ್ನಸಂಗಯ್ಯನಲ್ಲಿ ತನ್ನ ಪ್ರಸನ್ನದೊಳಗೆ ಇಂಬಿಟ್ಟುಕೊಂಡನು ಎನ್ನ ಹೆತ್ತ ತಂದೆ ಸಂಗನಬಸವಣ್ಣನು.. ✍🏼 ಅಕ್ಕ ನಾಗಲಾಂಬಿಕೆಯವರ (ಬಸವಣ್ಣನವರ ಹಿರಿಯ ಸಹೋದರಿ) ವಚನ.. ಶರಣು ಶರಣಾರ್ಥಿಗಳು 🙏 #ವಚನಗಳು #//🌳ವಚನ ಸಾಹಿತ್ಯ 🌳// #ಬಸವಣ್ಣನವರ ವಚನಗಳು #ಬಸವಾದಿ ಶರಣ ಶರಣೆಯರು #ಶರಣ ಸಾಹಿತ್ಯ


