ShareChat
click to see wallet page
search
#📜ಪ್ರಚಲಿತ ವಿದ್ಯಮಾನ📜 ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯಲಾಗುವುದು: ಸಿದ್ದರಾಮಯ್ಯ ಬೆಂಗಳೂರು: ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ದವಾಗಿ ಕೈಗೊಳ್ಳುತ್ತಿರುವ ನಿರ್ಧಾರಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದಕ್ಷಿಣ ಭಾರತ ಸಮಾಜವಾದಿಗಳ ಸಮಾಜವಾದಿಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ವ್ಯವಸ್ಥೆ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುವ ರೀತಿಯಲ್ಲಿಯೇ ನಡೆದುಕೊಳ್ಳುತ್ತಿದೆ. ಇದರಿಂದ ರಾಜ್ಯಗಳಿಗೆ ಕೇಂದ್ರದಿಂದ ಬರಬೇಕಾದ ಅನುದಾನ ಕಡಿಮೆಯಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೆಚ್ಚು ಅನ್ಯಾವವಾಗುತ್ತಿದ್ದು, ಇದನ್ನು ಪ್ರಜಾಸತ್ತಾತ್ಮಕವಾಗಿಯೇ ಪ್ರಶ್ನಿಸಬೇಕಾಗಿದೆ ಎಂದರು. ಕರ್ನಾಟಕ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ನೀಡುವ ರಾಜ್ಯಗಳಲ್ಲಿ ಒಂದು. ಆದರೆ ನಮಗೆ ಕೇಂದ್ರದಿಂದ ಬರುತ್ತಿರುವ ಅನುದಾನದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಈಗ ಮನರೇಗ ಯೋಜನೆ ಮೂಲಕ ನೀಡುತ್ತಿದ್ದ ಅನುದಾನದ ಪ್ರಮಾಣ ತಗ್ಗಿಸಿದ್ದು, ರಾಜ್ಯಗಳ ಆರ್ಥಿಕ ವ್ಯವಸ್ಥೆಗದ ಹೊಡೆತ ಬೀಳಲಿದೆ ಎಂದರು. ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡುವ ಮೂಲಕ ದಕ್ಷಿಣ ರಾಜ್ಯಗಳ ವ್ಯಾಪ್ತಿಯ ಕ್ಷೇತ್ರಗಳ ಪ್ರಮಾಣ ಕಡಿಮೆ ಮಾಡಿ ಹಿಂದಿ ಭಾಷೆ ಪ್ರಾಬಲ್ಯ ಇರುವ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಹೆಚ್ಚಿಸುವ ಹುನ್ನಾರ ನಡೆದಿದೆ. ಇದನ್ನು ಬಲವಾಗಿ ವಿರೋಧಿಸಿ ನಮ್ಮ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ ಎಂದರು. #meeting #SouthIndian #CM #called #soon #Siddaramaiah #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat