ಪುತ್ತೂರು ‘ಲವ್-ಸೆಕ್ಸ್-ಧೋಖಾ’ ಪ್ರಕರಣ: ಜನವರಿ 31ರೊಳಗೆ ಮದುವೆಯಾಗದಿದ್ದರೆ ಸಂಧಾನವಿಲ್ಲ - ಪ್ರತಿಭಾ ಕುಳಾಯಿ ಎಚ್ಚರಿಕೆ
ಮಂಗಳೂರು: ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ 'ಲವ್-ಸೆಕ್ಸ್-ಧೋಖಾ' ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಪ್ರಕ್ರಿಯೆಗೆ ಜನವರಿ 31ರ ಗಡುವು ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಯೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ಮಗುವಿನ ನಾಮಕರಣ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿ, ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.ಆರೋಪಿ ಕೃಷ್ಣ ಜೆ. ರಾವ್ ಕುಟುಂಬದವರು ಮದುವೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ, ಜ. 24ಕ್ಕೆ ನಿಗದಿಯಾಗಿದ್ದ ಮಗುವಿನ ತೊಟ್ಟ