#📜ಪ್ರಚಲಿತ ವಿದ್ಯಮಾನ📜
ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ: ಡಿ ಕೆ ಶಿವಕುಮಾರ್
ಬೆಂಗಳೂರು: ಕೋಗಿಲು ಬಡಾವಣೆ ಅಕ್ರಮ ವಲಸಿಗರ ತೆರವು ವಿಚಾರ ತೀವ್ರ ಜಟಾಪಟಿಗೆ ಕಾರಣವಾಗಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಓಲೈಕೆ ರಾಜಕಾರಣ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ ಕೆ ಶಿವಕುಮಾರ್, ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ ಎಂದು ಹೇಳಿದರು.
ಸರ್ಕಾರ ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರು ಹಣ ಸಂಗ್ರಹಿಸಿದ್ದಾರೆ ಎಂದು ಅಲ್ಲಿನವರೇ ಹೇಳಿಕೆ ನೀಡಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಯಾರಿಗೆ ಅರ್ಹತೆ ಇದೆಯೋ ಅವರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ ಮನೆ ನೀಡಲಾಗುವುದು ಎಂದರು.
ಈ ಹಿಂದೆ ಕೆಲವು ಭಾಗಗಳಲ್ಲಿ ಹಕ್ಕುಪತ್ರಗಳನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ. ಅದನ್ನು ಪರಿಶೀಲನೆ ನಡೆಸಲು ತಿಳಿಸಿದ್ದೇನೆ. ಹೊರಗಿನಿಂದ ಬಂದವರು ಸಹ ಹೊಸದಾಗಿ ಸೇರಿಕೊಂಡಿದ್ದಾರೆ. ನೈಜ ಮತದಾರರು ಎಷ್ಟಿದ್ದಾರೆ ಎಂಬ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ, ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದರು.
ಒತ್ತುವರಿ ಆರೋಪದಲ್ಲಿ ತೆರವುಗೊಳಿಸಲಾಗಿರುವ ಕುಟುಂಬಗಳ ಪೈಕಿಅರ್ಹರಿಗೆ ಮಾತ್ರ ಮನೆ ನೀಡಲಾಗುವುದು. ಸ್ಥಳೀಯ ಮತದಾರರ ಪಟ್ಟಿಯಲ್ಲಿ ಹೆಸರು ಹಾಗೂ ನಿಜವಾದ ಸ್ಥಳೀಯ ವಿಳಾದ ಇದ್ದರೆ ಮಾತ್ರ ಮನೆ ನೀಡಲಾಗುವುದು. ಯಾವುದೇ ಸಕ್ರಮ ಮಾಡುತ್ತಿಲ್ಲ. ಅರ್ಹರನ್ನು ಗುರುತಿಸಲಾಗುವುದು ಎಂದರು.
#noquestion #playing #politics #appeasement #anyway #DKShivakumar #malgudiexpress #malgudinews #news #TopNews


