ಸುಳ್ಳು ವಿಡಿಯೋ ಪ್ರಕರಣ : ವ್ಯಕ್ತಿಯ ಆತ್ಮಹತ್ಯೆಗೆ ಕಾರಣವಾದ ಶಿಂಜಿತಾ ಮುಸ್ತಫಾ ಬಂಧನ
ತಿರುವನಂತಪುರಂ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯಲು ಬಸ್ಸಿನಲ್ಲಿ ವ್ಯಕ್ತಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೊಂಡು, ಅವರ ಸಾವಿಗೆ ಕಾರಣವಾದ ಆರೋಪದಡಿ ಶಿಂಜಿತಾ ಮುಸ್ತಫಾ ಎಂಬಾಕೆಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ದೀಪಕ್ ಎಂಬುವವರು ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಶಿಂಜಿತಾ ವಿಡಿಯೋ ಮಾಡಿ ವೈರಲ್ ಮಾಡಿದ್ದಳು. ಇದರಿಂದ ಮನನೊಂದ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ತನಿಖೆಯ ವೇಳೆ ಬಸ್ ಚಾಲಕ ಮತ್ತು ಕಂಡಕ್ಟರ್ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಸಾಕ್ಷ್ಯ ನೀಡಿದ್ದಾರೆ. ದೀಪಕ್ ಪೋಷಕರ ದೂರಿನನ್ವಯ ಆತ್ಮಹ