#📜ಪ್ರಚಲಿತ ವಿದ್ಯಮಾನ📜
5.15 ಕೋಟಿ ಮೌಲ್ಯದ ಎಂಡಿಎಂಎ ಹಾಗೂ 300 ಎಕ್ಸ್ ಟೆಸಿ ಮಾತ್ರೆ ವಶ
ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ನಂತರವೂ ಮಾದಕ ವಸ್ತು ಮಾರಾಟದಲ್ಲಿ ಭಾಗಿಯಾಗಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 5.15 ಕೋಟಿ ಮೌಲ್ಯದ ಎಂಡಿಎಂಎ ಹಾಗೂ 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಿಸಿಬಿ ಕೇಂದ್ರ ಅಪರಾಧ ದಳದ ಆಂಟಿ ನಾರ್ಕೋಟಿಕ್‌್ಸ ವಿಂಗ್ ತಂಡವು ಕಾರ್ಯಾ ಚರಣೆ ನಡೆಸಿ, ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮುನೇ ಕೊಳಲು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತನ್ನ ವಾಸದ ಮನೆಯಲ್ಲೇ ಮಾದಕ ವಸ್ತುಗಳನ್ನು ಸಂಗ್ರಹಿಸಿಕೊಂಡು ಮಾರಾಟ ಮಾಡುತ್ತಿದ್ದ ಸಂಗತಿ ಗೊತ್ತಾಗಿದೆ.
ಆತನ ಮನೆಯಲ್ಲಿದ್ದ 2 ಕೆಜಿ 500 ಗ್ರಾಂ ಎಂಡಿಎಂಎ, 300 ಎಕ್‌್ಸಟೆಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ ಸುಮಾರು 5.15 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ.
ಆರೋಪಿಯನ್ನು ಸುದೀರ್ಘ ವಿಚಾರಣೆ ನಡೆಸಿದಾಗ ಈ ಹಿಂದೆ ಹೆಣ್ಣೂರು, ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಅಪರಾಧ ಪ್ರಕರಣಗಳು ದಾಖಲಾಗಿರುವುದು ಗೊತ್ತಾಗಿದೆ.
ಈತ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಬಳಿಕ ಪುನಃ ತನ್ನ ಅಕ್ರಮ ಚಟುವಟಿಕೆಗಳನ್ನು ಮುಂದುವರೆಸಿದ್ದ. ಹಾಗಾಗಿ ಸಿಸಿಬಿ ಎಎನ್‌ಡಬ್ಲ್ಯೂ ಅಧಿಕಾರಿಗಳು ಈತನ ಚಲನವಲನದ ಮೇಲೆ ನಿಗಾ ವಹಿಸಿದ್ದರು. ಆ ಸಂದರ್ಭದಲ್ಲಿ ವಿದೇಶಿ ಪ್ರಜೆ ಮತ್ತೆ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದಾಗ ಖಚಿತ ಮಾಹಿತಿ ಮೇರೆಗೆ ಬಂಧಿಸಿದ್ದಾರೆ.
ಮಾದಕ ವಸ್ತುಗಳ ಮೂಲ ಪತ್ತೆ, ಹಿಂದಿನ ಹಾಗೂ ಮುಂದಿನ ಸಂಪರ್ಕಕೊಂಡಿಗಳನ್ನು ಗುರುತಿಸಿರುವುದು, ಈ ಜಾಲದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳ ಪತ್ತೆ ಹಚ್ಚುವ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.
#crore #MDMA #Ecstasy #pills #seized #malgudiexpress #malgudinews #news #TopNews


