ಬೆಂಗಳೂರಿನಲ್ಲೇ ಆರ್‌ಸಿಬಿ ಅಬ್ಬರ? ಚಿನ್ನಸ್ವಾಮಿ ಕ್ರೀಡಾಂಗಣ ಉಳಿಸಿಕೊಳ್ಳಲು ಫ್ರಾಂಚೈಸಿ ಒಲವು!
ಬೆಂಗಳೂರು: ಐಪಿಎಲ್ ಅಭಿಮಾನಿಗಳಿಗೆ, ವಿಶೇಷವಾಗಿ ಆರ್‌ಸಿಬಿ (RCB) ಬೆಂಬಲಿಗರಿಗೆ ಶುಭ ಸುದ್ದಿಯೊಂದು ಕೇಳಿಬರುತ್ತಿದೆ. ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಪಂದ್ಯಗಳನ್ನು ಎಂದಿನಂತೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಆಡುವ ಇಂಗಿತ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.ತಂಡಗಳ ತವರು ಮೈದಾನಗಳನ್ನು ಖಚಿತಪಡಿಸಲು ಬಿಸಿಸಿಐ (BCCI) ನೀಡಿದ್ದ ಜ. 27ರ ಗಡುವು ಮುಕ್ತಾಯಗೊಂಡಿದ್ದು, ಆರ್‌ಸಿಬಿ ತನ್ನ ಪಂದ್ಯಗಳನ್ನು ಬೆಂಗಳೂರಿನಲ್ಲೇ ಆಡುವುದಾಗಿ ತಿಳಿಸಿದೆ ಎನ್ನಲಾಗಿದೆ. ಕ್ರೀಡಾಂಗಣದ ಸುರಕ್ಷತೆ ಮತ್ತು ಇತರೆ ತಾಂತ್ರಿಕ ವಿಷಯಗಳ ಕುರಿತು ಫ್ರಾಂಚೈ