Womens Cricket- ಶ್ರೀಲಂಕಾ ವಿರುದ್ಧ ಟಿ20 ಸರಣಿಗೆ ಭಾರತ ತಂಡ ಪ್ರಕಟ; ವಿಶ್ವಕಪ್ ಗೆದ್ದ ತಂಡದಲ್ಲಿದ್ದ ಇಬ್ಬರು ಔಟ್!
India W Vs Sri Lanka W T20 Series- ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಡಿಸೆಂಬರ್ 21 ರಿಂದ ಆರಂಭವಾಗುವ ಈ ಸರಣಿಗೆ ಇಬ್ಬರು ಹೊಸ ಆಟಗಾರ್ತಿಯರಾದ ಗುಣಲನ್ ಕಮಲಿನಿ ಮತ್ತು ವೈಷ್ಣವಿ ಶರ್ಮಾ ಆಯ್ಕೆಯಾಗಿದ್ದಾರೆ. ಹರ್ಮನ್ಪ್ರೀತ್ ಕೌರ್ ನಾಯಕಿಯಾಗಿದ್ದು, ಸ್ಮೃತಿ ಮಂದಾನ ಉಪನಾಯಕಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಪ್ರತೀಕಾ ರಾವಲ್ ಅವರ ಬದಲಿಗೆ ತಂಡಕ್ಕೆ ಆಯ್ಕೆಯಾಗಿ ವಿಶ್ವಕಪ್ ಫೈನಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಶೆಫಾಲಿ ವರ್ಮಾ ಅವರನ್ನು ತಂಡದಲ್ಲಿ ಮುಂದುವರಿಸಲಾಗಿದೆ.