ShareChat
click to see wallet page
search
#📜ಪ್ರಚಲಿತ ವಿದ್ಯಮಾನ📜 ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ 9 ಮತ್ತು 10 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. #Modern #Sheep #Goat #Farming #Training #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat