#📜ಪ್ರಚಲಿತ ವಿದ್ಯಮಾನ📜
ಷೇರು ಮಾರುಕಟ್ಟೆಯಲ್ಲಿ ಲಾಭದ ಹೆಸರಿನಲ್ಲಿ ವಂಚನೆ
ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದೊಡ್ಡ ಪ್ರಮಾಣದಲ್ಲಿ ಲಾಭ ಬರಲಿದೆ ಎಂದು ನಂಬಿಸಿ ಆನ್ ಲೈನ್ ನಲ್ಲಿ ಕೋಟ್ಯಾಂತರ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನು ಬೆಂಗಳೂರು ನೈರುತ್ಯ ವಿಭಾಗದ ಪೊಲೀಸರು ಬೇಧಿಸಿ 6 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ವಂಚನಾ ಜಾಲದಲ್ಲಿದ್ದ 8 ಆರೋಪಿಗಳನ್ನು ಬಂಧಿಸಿ ಇನ್ನೂ ಕೆಲವರ ಬಂಧನಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಅನಿತಾಹದ್ದಣ್ಣವರ್ ತಿಳಿಸಿದ್ದಾರೆ.
ಬಂಧಿತರಿಂದ 19 ಲ್ಯಾಪ್ಟಾಪ್, 40 ಮೊಬೈಲ್, 11 ಪೆನ್ ಡ್ರೈವ್, 42 ಸಿಮ್ ಕಾರ್ಡ್, 4 ಐಪ್ಯಾಡ್, 2 ಹಾರ್ಡ್ ಡಿಸ್ಕ್, 5 ಸಿಪಿಯು, 13 ಸೀಲ್ ಗಳು, 10 ಮೆಮೊರಿ ಕಾರ್ಡ್ ಹಾಗೂ ವಿದೇಶಿ ಕರೆನ್ಸಿ, ಕರೆನ್ಸಿ ಕೌಟಿಂಗ್ ಮಷೀನ್ ಸೇರಿ 6 ಕೋಟಿ ಮೌಲ್ಯದ ಸ್ಥಿರಾಸ್ತಿ 50 ಹೆಚ್ಚು ದಾಖಲಾತಿಗಳನ್ನು ಜಪ್ತಿ ಮಾಡಿ ಪರಿಶೀಲನೆ ಕೈಗೊಳ್ಳಲಾಗಿದೆ ಎಂದರು.
ಜಾಲದ ಆರೋಪಿಗಳು ಹೆಚ್ಚಿನ ಲಾಭದ ಆಸೆ ತೋರಿಸಿ ಹೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುತ್ತಿದ್ದು, ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ದೇಶ ವಿದೇಶದ ಸಾರ್ವಜನಿಕರಿಗೆ ಹಣ ಹೂಡಿಕೆ ಮಾಡಲು ಆಮಿಷ ಒಡ್ದುತ್ತಿದ್ದರು. ಹೆಚ್ಚು ಲಾಭ ನೀಡುವುದು ಜನರಿಂದ ಹಣ ಸಂಗ್ರಹಿಸಿ ಆರೋಪಿಗಳು ವಂಚನೆ ಮಾಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದರು.
ಕೆಂಗೇರಿ ಪೊಲೀಸರನ್ನೊಳಗೊಂಡ ವಿಶೇಷ ತಂಡಗಳು ಏಳು ಕಡೆ ದಾಳಿ ನಡೆಸಿ 8 ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಜಾಲದಿಂದ ವಂಚಿತರಾಗಿರುವ ಸಾರ್ವಜನಿಕರು ಕೆಂಗೇರಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಡಿಸಿಪಿ ಅನಿತಾ ಹದ್ದಣ್ಣವರ್ ಮನವಿ ಮಾಡಿದ್ದಾರೆ.
#Fraud #name #profit #stockmarket #malgudiexpress #malgudinews #news #TopNews