ShareChat
click to see wallet page
search
#🤑ಬಿಪಿಎಲ್‌ ಕಾರ್ಡ್​​​​​​​​​​ದಾರರಿಗೆ ಭರ್ಜರಿ ಸುದ್ದಿ ನೀಡಿದ ರಾಜ್ಯ ಸರ್ಕಾರ BPL Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇದರಲ್ಲಿಯೂ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್‌ ರೇಷನ್‌ ಕಾರ್ಡ್‌ಗೆ ಹಲವು ಸರ್ಕಾರಿ ಸೌಲಭ್ಯಗಳನ್ನು ದೊರೆಯಲಿವೆ. ಇದನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಇದೀಗ ಹೊಸ ಬಿಪಿಎಲ್‌ ಕಾರ್ಡ್‌ ನೀರೀಕ್ಷಯಲ್ಲಿದ್ದವರಿಗೆ ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ.ರಾಜ್ಯದಲ್ಲಿ ಅನರ್ಹರು ಕೂಡ ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನುವ ಆರೋಪ ಮೊದಲಿನಿಂದಲೂ ಕೇಳಿಬರುತ್ತಲಿದೆ. ಈ ಬಗ್ಗೆ ಎಚ್ಚೆತ್ತಿರುವ ಸರ್ಕಾರ ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಮುಂದುವರೆಸಿದೆ. ಇದೇ ಕಾರಣಕ್ಕೆ ಇಷ್ಟು ದಿನ ಹೊಸ ಬಿಪಿಎಲ್ ಕಾರ್ಡ್‌ ವಿತರಣೆಗೆ ಸರ್ಕಾರ ಹಿಂದೇಟು ಹಾಕಿದ್ದು, ಇದೀಗ ಈ ಕಾರ್ಡ್‌ ನಿರೀಕ್ಷೆಯಲ್ಲಿ ಇದ್ದವರಿಗೆ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ.ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿರುವ ಜನರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಪರಿಷ್ಕರಣೆ ಪೂರ್ಣಗೊಂಡ ಬಳಿಕ ಹೊಸ ಬಿಪಿಎಲ್‌ ರೇಷನ್‌ ಕಾರ್ಡ್‌ಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ.ಎಚ್‌.ಮುನಿಯಪ್ಪ ಅವರು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಡಾ.ಭರತ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ.ಎಚ್. ಮುನಿಯಪ್ಪ ಅವರು, ಭಾರತದ ಆರ್ಥಿಕ ಪ್ರಗತಿಯ ದೃಷ್ಟಿಯಿಂದ ಮಹಾರಾಷ್ಟ್ರದ ನಂತರ ಕರ್ನಾಟಕವು ಎರಡನೇ ಸ್ಥಾನದಲ್ಲಿ ಇದೆ. ಇಂತಹ ಅಭಿವೃದ್ಧಿ ಹೊಂದಿದ ರಾಜ್ಯದಲ್ಲಿಯೂ ಸುಮಾರು ಶೇಕಡ 70-75ರಷ್ಟು ಜನ ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿರುವುದೇ ಶ್ಚರ್ಯವಾಗಿದೆ ಎಂದು ಹೇಳದರು. #🆕ಲೇಟೆಸ್ಟ್ ಅಪ್ಡೇಟ್ಸ್ 📰 #📰ಇಂದಿನ ಅಪ್ಡೇಟ್ಸ್ 📲
🤑ಬಿಪಿಎಲ್‌ ಕಾರ್ಡ್​​​​​​​​​​ದಾರರಿಗೆ ಭರ್ಜರಿ ಸುದ್ದಿ ನೀಡಿದ ರಾಜ್ಯ ಸರ್ಕಾರ - ShareChat
00:09