ShareChat
click to see wallet page
search
#🚨ಕನ್ನಡ ಚಿತ್ರ ನಿರ್ಮಾಪಕ ವಿರುದ್ಧ FIR 🚨 ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ವ್ಯಕ್ತಿಯೊಬ್ಬರ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೆ ಜಮೀನು ಖಾಲಿ ಮಾಡುವಂತೆ ಜೀವ ಬೆದರಿಕೆ ಹಾಕಿದ ಆರೋಪದಡಿ ಚಿತ್ರ ನಿರ್ಮಾಪಕ ಮತ್ತು ಆತನ ಸಹಚಾರ ವಿರುದ್ಧ ಬೆಳ್ಳಂದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಜೀವ ನಗರದ ನಿವಾಸಿ ರಾಮಮೂರ್ತಿ(70) ಎಂಬುವರು ನೀಡಿದ ದೂರಿನ ಮೇರೆಗೆ ಕನ್ನಡದ 'ದಿಯಾ' ಚಿತ್ರದ ನಿರ್ಮಾಪಕ ಕೃಷ್ಣ ಚೈತನ್ಯ, ಸಚಿನ್ ನಾರಾಯಣ್, ಸತ್ಯನಾರಾಯಣ ರೆಡ್ಡಿ ಮತ್ತು ಸಹಚರರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ದೂರುದಾರ ರಾಮಮೂರ್ತಿ ಅವರು 2005 ರಲ್ಲಿ ಶಿವರಾಮ ರೆಡ್ಡಿ ಅವರ ಕುಟುಂಬದಿಂದ ವರ್ತೂರು ಹೋಬಳಿ ಕಸವನಹಳ್ಳಿ ಗ್ರಾಮದ ಸರ್ವೇ ನಂಬರ್ 52 ರಲ್ಲಿ 3.35 ಎಕರೆ ಜಮೀನನ್ನು ಶುದ್ಧ ಕ್ರಯಕ್ಕೆ ಖರೀದಿಸಿದ್ದರು. ಈ ಜಮೀನಿನಲ್ಲಿ ನರ್ಸರಿ ಮಾಡುವ ಉದ್ದೇಶದಿಂದ ಆಗಸ್ಟ್ 10ರಂದು ಶಶಿಕಲಾ ಮತ್ತು ಕೋದಂಡಾಚಾರಿ ಅವರಿಗೆ ಭೋಗ್ಯದ ಕರಾರು ಮಾಡಿಕೊಟ್ಟಿದ್ದರು. #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰 #🍿ಸ್ಯಾಂಡಲ್ ವುಡ್
🚨ಕನ್ನಡ ಚಿತ್ರ ನಿರ್ಮಾಪಕ ವಿರುದ್ಧ FIR 🚨 - ShareChat
00:09