#😍BPL ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್😍 BPL Ration Card: ಪಡಿತರ ಚೀಟಿಗಳಲ್ಲಿ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್ ರೇಷನ್ ಕಾರ್ಡ್‌ಗೆ ಪಡಿತರದ ಜೊತೆಗೆ ಹೆಚ್ಚು ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುತ್ತದೆ. ಈ ಕಾರ್ಡ್‌ದಾರರಿಗೆ ರಾಜ್ಯ ಸರ್ಕಾರ ಇದೀಗ ಗುಡ್‌ನ್ಯೂಸ್‌ವೊಂದನ್ನು ನೀಡಿದೆರಾಜ್ಯದಲ್ಲಿ ಈಗಾಗಲೇ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಮುಂದಾಗಿತ್ತು. ಈ ವೇಳೆ ಬಡವರ ಬಳಿಯ ಕಾರ್ಡ್‌ಗಳನ್ನ ಸಹ ರದ್ದು ಮಾಡಿದೆ ಎಂದು ಸರ್ಕಾರದ ವಿರುದ್ಧ ಹಲವು ಜಿಲ್ಲೆಗಳಲ್ಲಿ ಜನರು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಎಚ್ಚೆತ್ತ ಸರ್ಕಾರ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್‌ಗಳನ್ನು ವಾಪಾಸ್ ನೀಡಿ ಅವರಿಗೆ ಸಿಗಬೇಕಾದ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ಭರವಸೆ ನೀಡಿತ್ತು.
ಇನ್ನು ಮೊದಲಿನಿಂದಲೂ ಸಹ ಶ್ರೀಮಂತರು ಸಹ ಪಡಿತರ ಚೀಟಿಗಳನ್ನು ಹೊಂದಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಲಿದ್ದವು. ಬಳಿಕ ಅನರ್ಹರ ಬಳಿಯಿರುವ ಕಾರ್ಡ್‌ಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಬಡವರಿಗೆ ಸರಿಯಾಗಿ ಪಡಿತರ ಸಿಗಬೇಕೆನ್ನುವ ದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ನಡುವೆಯೇ ಇದೀಗ ಬಿಪಿಎಲ್ ಕಾರ್ಡ್‌ದಾರರಿಗೆ ಅನುಕೂಲಕ ಆಗುವಂತೆ ಮಹತ್ವದ ನಿರ್ರರ್ಧಾರವೊಂದಕ್ಕೆ ಕೈಹಾಕಿದೆ.ಸಾಮಾನ್ಯವಾಗಿ ಬಿಪಿಎಲ್ ಕಾರ್ಡ ಅನ್ನು ಬಡವರಿಗೆ ಕಡಿಮೆ ಅಥವಾ ಉಚಿತ ಪಡಿತರ ಸಿಗಲೆನ್ನುವ ಉದ್ದೇಶದಿಂದ ನೀಡಲಾಗುತ್ತದೆ. ಆಗಾಗ ರಾಜ್ಯ ಸರ್ಕಾರ ಈ ಕಾರ್ಡುದಾರರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಗುಡ್‌ನ್ಯೂಸ್ ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ರಾಜ್ಯದ ಸರ್ಕಾರ ಆಹಾರ ಭದ್ರತೆ ಹಾಗೂ ಬಡವರಿಗೆ ನೆರವು ಎಂಬ ಉದ್ದೇಶದೊಂದಿಗೆ ಅನ್ನಭಾಗ್ಯ ಯೋಜನೆಯನ್ನು ಮತ್ತಷ್ಟು ಬಲಪಡಿಸಿದೆ. ಇದೇ ಜುಲೈ ತಿಂಗಳಿನಲ್ಲಿ ಬಿಪಿಎಲ್, ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಈ ಯೋಜನೆಯ ಮೂಲಕ ಬಡಕುಟುಂಬಗಳಿಗೆ ನೇರವಾಗಿ ನೆರವು ಸಿಕ್ಕಂತಾಗಿದೆ. #📰ಇಂದಿನ ಅಪ್ಡೇಟ್ಸ್ 📲 #🆕ಲೇಟೆಸ್ಟ್ ಅಪ್ಡೇಟ್ಸ್ 📰
00:08

