
꯭̽♔︎꯭꯭꯭꯭❥꯭𝐆꯭꯭꯭𝝾꯭꯭꯭֟፝͠𝗺𝗯꯭꯭𝝴༐꯭꯭꯭🦋̲͟
@gombe_r
🙏🏻ಹೆಣ್ಣನ್ನು ಗೌರವಿಸಿ ನಿಮ್ಮ ತಾಯಿ ಕೂಡ ಹೆಣ್ಣು🙏🏻
#🚨 RCB ನಾಯಕಿ ಮದುವೆ ದಿನವೇ ಆಘಾತ-ತಂದೆ ಬಳಿಕ ಭಾವಿ ಪತಿಗೂ ಅನಾರೋಗ್ಯ🚨
#🌳💔ಸಾಲುಮರದ ತಿಮ್ಮಕ್ಕ ನಿಧನ: ಮರೆಯಾದ ವೃಕ್ಷಮಾತೆ😭🌳
#📢ದೀಪಾವಳಿ ಗಿಫ್ಟ್ : ಗೃಹ ಲಕ್ಷ್ಮಿಫಲಾನುಭವಿಗಳಿಗೆ 6000 ರೂಪಾಯಿ 🤩 ಗೃಹಲಕ್ಷ್ಮೀ ಯೋಜನೆ ಹಣ ವಿಳಂಬಕ್ಕೆ ಸಂಬಂಧಿಸಿದಂತೆ ಮಾತನಾಡಿರುವ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ದೀಪಾವಳಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ₹6,000 ಹಣ ಜಮಾ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಕೆಲವು ತಾಂತ್ರಿಕ ದೋಷದಿಂದಾಗಿ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಸಂದಾಯ ವಿಳಂಬವಾಗಿತ್ತು. ಇದೀಗ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಮೂರು ತಿಂಗಳು ಸೇರಿಸಿ, ಮಹಿಳೆಯರ ಖಾತೆಗೆ ಒಟ್ಟಿಗೆ ₹6,000 ಗೃಹಲಕ್ಷ್ಮಿ ಹಣ ಹಾಕಲಾಗುವುದು. ದೀಪಾವಳಿ ಹಬ್ಬ ಮುಗಿಯುವುದರೊಳಗೆ ಮಹಿಳೆಯಾರ ಖಾತೆಗೆ ಹಣ ಸೇರಲಿದೆ ಎಂದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
#👸48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ😍 ಫಿಲಿಪ್ಪೀನ್ಸ್‌ನಲ್ಲಿ ನಡೆದ 48ನೇ ಆವೃತ್ತಿಯ ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶೆರಿ ಸಿಂಗ್ ವಿಜೇತರಾಗಿ ಆಯ್ಕೆಯಾಗಿದ್ದಾರೆ.ಫಿಲಿಪ್ಪೀನ್ಸ್‌ನ ಮನಿಲಾದಲ್ಲಿ ನಡೆದ 48ನೇ ಆವೃತ್ತಿಯ ಮಿಸ್ ಯೂನಿವರ್ಸ್ ಸೌಂದರ್ಯ ಸ್ಪರ್ಧೆಯಲ್ಲಿ ಭಾರತದ ಶೆರಿ ಸಿಂಗ್ ವಿಜೇತರಾಗಿದ್ದಾರೆ.120 ಸ್ಪರ್ಧಿಗಳು ಭಾಗಿಯಾಗಿದ್ದ ಸ್ಪರ್ಧೆಯಲ್ಲಿ ಸೇಂಟ್ ಪೀಟರ್ಸ್ಬರ್ಗ್ನ ಸ್ಪರ್ಧಿ ಮೊದಲ ರನ್ನರ್ ಅಪ್, ಫಿಲಿಪ್ಪೀನ್ಸ್ನ ಸ್ಪರ್ಧಿ 2ನೇ ರನ್ನರ್ ಅಪ್ ಆಗಿದ್ದಾರೆ.
ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಶೆರಿ, 'ತನ್ನ ಮಿತಿಯಿಂದ ಹೊರಗೆ ಕನಸು ಕಾಣುವ ದೈರ್ಯ ಮಾಡುವ ಎಲ್ಲ ಮಹಿಳೆಗೂ ಈ ಗೆಲುವು ಸಲ್ಲುತ್ತದೆ' ಎಂದಿದ್ದಾರೆ.
ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಸ್ಪರ್ಧಿ ಶೆರಿ ಸಿಂಗ್ ಆಗಿದ್ದಾರೆ. ಇತರ ಅಂತಿಮ ಸ್ಪರ್ಧಿಗಳು ಯುಎಸ್ಎ, ಜಪಾನ್, ಮ್ಯಾನ್ಮಾರ್, ಬಲ್ಗೇರಿಯಾ, ಯುಎಇ, ಆಫ್ರಿಕಾ ಮತ್ತು ಉಕ್ರೇನ್‌ನಂತಹ ರಾಷ್ಟ್ರಗಳು ಮತ್ತು ಪ್ರದೇಶಗಳನ್ನು ಪ್ರತಿನಿಧಿಸಿದರು.
#❌ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ವಿವಾದಾತ್ಮಕ ಹೇಳಿಕೆ ಕೊಟ್ಟ ಮುಖ್ಯಮಂತ್ರಿ😧 ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದೆ.
"ಬಂಗಾಳಕ್ಕೆ ಬರುವ ಇತರ ರಾಜ್ಯಗಳ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು, ಹಾಸ್ಟೆಲ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು," ಎಂಬ ಅವರ ಹೇಳಿಕೆ ಪ್ರತಿ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.ಮಮತಾ ಬ್ಯಾನರ್ಜಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ, "ಅಪರಾಧಿಗಳಿಗೆ ಯಾವುದೇ ರಿಯಾಯಿತಿ ಇಲ್ಲ. ಮೂವರನ್ನು ಬಂಧಿಸಲಾಗಿದೆ, ಉಳಿದವರಿಗಾಗಿ ಹುಡುಕಾಟ ಮುಂದುವರೆದಿದೆ," ಎಂದು ಹೇಳಿದರು. ಆದರೆ ಹುಡುಗಿಯರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಅವರ ಸಲಹೆ ಸಾಮಾಜಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ.
#🎦ಕನ್ನಡ ಚಿತ್ರರಂಗದಿಂದ ಖ್ಯಾತ ನಟಿ ಬ್ಯಾನ್ 😲 ರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿ ಪಡೆದ ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾದಲ್ಲಿ ಮಾತ್ರ ಯಾಕೆ ಅಭಿನಯಿಸುತ್ತಿಲ್ಲ? ಅವರನ್ನು ಕನ್ನಡ ಸಿನಿಮಾ ರಂಗದಿಂದ ಬ್ಯಾನ್ ಮಾಡಿದ್ದಾರಾ? ಎಂಬ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ರಶ್ಮಿಕಾ ಅವರೇ ಇದೀಗ ಉತ್ತರ ನೀಡಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಕೊಡಗಿನ ಮೂಲದವರಾಗಿದ್ದು, ತಮ್ಮ ವೃತ್ತಿ ಜೀವನ, ಶಿಕ್ಷಣ ಎಲ್ಲ ಆರಂಭಿಸಿದ್ದು ಬೆಂಗಳೂರಿನಲ್ಲಿ. ಇತ್ತೀಚಿನ ಕೆಲವರ್ಷದಿಂದ ಅವರು ಕನ್ನಡದ ಯಾವುದೇ ಚಿತ್ರ ಮಾಡಿಲ್ಲ. ಹೀಗಾಗಿ ಅವರನ್ನು ಸ್ಯಾಂಡಲ್ವುಡ್ನಲ್ಲಿ ಬ್ಯಾನ್ ಮಾಡಿರಬಹುದೇ? ಎಂಬ ಅನುಮಾನ ಮೂಡುತ್ತಿದೆ. ಈ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ.
#📢ಶಾಲಾ ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ😲 ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸುವ ಸಲುವಾಗಿ, ಸರ್ಕಾರಿ ಮತ್ತು ಅನುದಾನಿತ (Aided) ಶಾಲೆಗಳ ವಿದ್ಯಾರ್ಥಿಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ ಸಂಘದಿಂದ ಸಿಎಂ ಭೇಟಿ ಮಾಡಿ ಸರ್ಕಾರದ ಜಾತಿ ಸಮೀಕ್ಷೆ ಮತ್ತು ಶಾಲೆಗೆ ಹಾಜರಾಗಿ ಪಾಠ ಬೋಧನೆ ಮಾಡುವುದು ಎರಡೂ ಕೆಲಸಗಳು ಹೊರೆ ಆಗಲಿವೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಒಂದು ಕೆಲಸಕ್ಕೆ ನಿಯೋಜನೆ ಮಾಡುವಂತೆ ಮನವಿ ಸಲ್ಲಿಕೆ ಮಾಡಿದ್ದರು. ಶಿಕ್ಷಕರ ಸಂಘದ ಮನವಿ ಸ್ವೀಕರಿಸಿದ ಬೆನ್ನಲ್ಲಿಯೇ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮೀಕ್ಷಾ ಕಾರ್ಯದಲ್ಲಿ ಹೆಚ್ಚಿನ ಶಿಕ್ಷಕರು ತೊಡಗಿಸಿಕೊಂಡಿರುವುದರಿಂದ ದಸರಾ ರಜೆಯ ಅವಧಿಯನ್ನು ಮತ್ತಷ್ಟು ವಿಸ್ತರಣೆ ಮಾಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷೆ ಕಾರ್ಯವು ಸೆಪ್ಟೆಂಬರ್ 22 ರಿಂದ ಆರಂಭಗೊಂಡಿತ್ತು. ಇದನ್ನು ಅಕ್ಟೋಬರ್ 7 ರೊಳಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ, ಸಮೀಕ್ಷೆಯ ಪ್ರಗತಿ ನಿರೀಕ್ಷಿಸಿದಷ್ಟು ಆಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ರಾಜ್ಯದಾದ್ಯಂತ ನಮ್ಮ ನಿರೀಕ್ಷೆಗೆ ತಕ್ಕಂತೆ ಸರ್ವೇ ಪೂರ್ಣಗೊಂಡಿಲ್ಲ. ಕೊಪ್ಪಳದಂತಹ ಕೆಲವು ಜಿಲ್ಲೆಗಳಲ್ಲಿ ಶೇ. 97ರಷ್ಟು ಪ್ರಗತಿ ಸಾಧಿಸಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೇವಲ ಶೇ. 60ರಷ್ಟು ಮಾತ್ರ ಆಗಿದೆ. ಅಕ್ಟೋಬರ್ 7 ಕೊನೆಯ ದಿನವಾಗಿದ್ದರೂ, ಎಲ್ಲ ಜಿಲ್ಲೆಗಳಲ್ಲಿ ಸಂಪೂರ್ಣ ಸರ್ವೇ ಪೂರ್ಣವಾಗುವುದು ಅಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.












