Malgudi Express
ShareChat
click to see wallet page
@news007
news007
Malgudi Express
@news007
Malgudi Express official Page
#📜ಪ್ರಚಲಿತ ವಿದ್ಯಮಾನ📜 Kantara A magnificent celebration of Kannada identity: HDKumaraswamy Kantara 🙏🙏🙏 A magnificent celebration of Kannada identity. A heartfelt portrayal of our cultural essence, deeply moving and profoundly authentic. A grand unveiling of Tulu Nadu’s rich traditions, spirituality, and divine heritage. This film is a creation that transcends words, a masterpiece of imagination and artistry. In New Delhi, my wife, Smt. Anitha Kumaraswamy, and I had the privilege of watching Kantara: Chapter 1. Heartfelt congratulations to Director Shri Rishab Shetty, Producer Shri Vijay Kiragandur, Hombale Films, and their entire team for this remarkable effort. I hope you continue to create such outstanding works, and may Kannada cinema see many more films of this global calibre. - H D Kumaraswamy, Central Minister @shetty_rishab @VKiragandur @hombalefilms #Kantara1 #Kantara #KantaraLegendChapter1 #Kantara #magnificent #celebration #Kannada #dentity #HDKumaraswamy #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಹಸಿವಿನಿಂದ ಬಳಲುತ್ತಿರುವ ಭಾರತದಲ್ಲಿ 284 ಬಿಲಿಯನೇರ್ ಸೃಷ್ಟಿಸಿದ ಮೋದಿ: ಡಾ.ಕೆ.ಪ್ರಕಾಶ್ ಮಂಗಳೂರು: ನವ ಉದಾರೀಕರಣದ ನೀತಿಗಳು ಅನುಷ್ಠಾನಗೊಂಡು ಮೂರು ದಶಕಗಳ ಈ ಅವಧಿಯಲ್ಲಿ ಭಾರತ ಅರ್ಥಿಕ ಸಮಾನತೆಯ ಉತ್ತುಂಗಕ್ಕೆ ತಲುಪಿದೆ ಎಂದು CITU ಕರ್ನಾಟಕ ರಾಜ್ಯ ಉಪಾಧ್ಯಕ್ಷ ಡಾ.ಕೆ ಪ್ರಕಾಶ್ ಹೇಳಿದರು. ನಗರದಲ್ಲಿಂದು ಜರುಗಿದ CITU 18ನೇ ದ.ಕ.ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಮಿಕರು ಕೂಲಿಕಾರರು ಸೇರಿದಂತೆ ದುಡಿಯುವ ಜನರು ಹಸಿವಿನಿಂದ ಬಳುತ್ತಿದ್ದಾರೆ. ಹೊಸ ಹೊಸ ಕಾಯಿದೆಗಳು ದುಡಿಯುವ ಜನರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ. ಇದರ ಪರಿಣಾಮ ಭಾರತ ದೇಶದಲ್ಲಿ 284 ಬಿಲಿಯನೇರ್ ಗಳು ಸೃಷ್ಟಿಯಾಗಿದ್ದಾರೆ ಎಂದರು. ನವ ಉದಾರೀಕರಣ ನೀತಿಗಳ ಪೂರ್ವದಲ್ಲಿ ಭಾರತದಲ್ಲಿ ಬಿಲಿಯನೇರ್ ಗಳು ಇರಲಿಲ್ಲ. ಈ ರೀತಿಯ ಬಡತನವೂ ಇರಲಿಲ್ಲ. ಆದರೆ ಇಂದು 284 ಬಿಲಿಯನೇರ್ ಗಳ ಕೈಯಲ್ಲಿ ಭಾರತ ದೇಶದ ಎರಡು ವರ್ಷಗಳ ಬಜೆಟ್ ಮೌಲ್ಯದಷ್ಟು ಸಂಪತ್ತು ಶೇಖರಣೆಗೊಂಡಿದೆ. ಇದರ ಪರಿಣಾಮವಾಗಿ ಹಸಿವು ಬಡತನ ನಿರುದ್ಯೋಗ ಅನಾರೋಗ್ಯ ಮಿತಿಮೀರುತ್ತಿದೆ. ಇದು ಅಂದಿನ ಕಾಂಗ್ರೆಸ್ ಆಡಳಿತದಲ್ಲಿ ಪ್ರಾರಂಭಗೊಂಡು ಪ್ರಸ್ತುತ ನರೇಂದ್ರ ಮೋದಿ ಕಾಲದಲ್ಲಿ ಉತ್ತುಂಗವನ್ನು ತಲುಪಿದೆ. ಇಂದು ಭಾರತದ ಆಡಳಿತವು ಈ ಬಿಲಿಯನೇರ್ ಗಳ ಮೂಗಿನ ನೇರಕ್ಕೆ ನಡೆಯುತ್ತಿದೆ. ನೀತಿಗಳೆಲ್ಲವೂ ಅವರ ಪರವಾಗಿ ರೂಪುಗೊಳ್ಳುತ್ತಿದೆ ಎಂದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿರಂತರವಾಗಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ದುಡಿಯುವ ವರ್ಗದ ಪರವಾಗಿ ಯಾವುದೇ ನೀತಿಗಳನ್ನು ಜಾರಿಗೊಳಿಸುತ್ತಿಲ್ಲ. ಇಂತಹ ಸರಕಾರಗಳ ಆಕ್ರಮಣಕಾರಿ ನೀತಿಗಳನ್ನು ಕಾರ್ಮಿಕ ವರ್ಗ ಸಮರಶೀಲ ಹೋರಾಟಗಳ ಮೂಲಕವೇ ಹಿಮ್ಮೆಟ್ಟಿಸಲು ಸಾಧ್ಯ ಎಂದರು. ಪ್ರಾರಂಭದಲ್ಲಿ ಧ್ವಜಾರೋಹಣದ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಿ ಬಳಿಕ ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ CITU ದ.ಕ.ಜಿಲ್ಲಾಧ್ಯಕ್ಷ ಜೆ ಬಾಲಕೃಷ್ಣ ಶೆಟ್ಟಿ ದ.ಕ.ಜಿಲ್ಲೆಯ ಕಾರ್ಮಿಕ ಚಳುವಳಿಯ ಧೀರೋದತ್ತವಾದ ಹೋರಾಟಗಳನ್ನು ಮೆಲುಕು ಹಾಕುತ್ತಾ, ಮುಂಬರುವ ದಿನಗಳಲ್ಲಿ ಬಲಿಷ್ಠವಾದ ಕಾರ್ಮಿಕ ಚಳುವಳಿಯನ್ನು ಕಟ್ಟುವ ಮೂಲಕ ಜಿಲ್ಲೆಯ ಸೌಹಾರ್ದತಾ ಪರಂಪರೆಯನ್ನು ಉಳಿಸಲು ಕಾರ್ಮಿಕ ವರ್ಗ ಕಟಿಬದ್ದರಾಗಿ ಶ್ರಮಿಸಬೇಕೆಂದು ಹೇಳಿದರು. ವೇದಿಕೆಯಲ್ಲಿ CITU ಜಿಲ್ಲಾ ನಾಯಕರಾದ ವಸಂತ ಅಚಾರಿ, ಸುಕುಮಾರ್ ತೊಕ್ಕೋಟು, ಬಿ ಎಂ.ಭಟ್, ರಮಣಿ ಮೂಡಬಿದ್ರೆ, ಪದ್ಮಾವತಿ ಶೆಟ್ಟಿ, ವಸಂತಿ ಕುಪ್ಪೆಪದವು, ಸುಂದರ ಕುಂಪಲ, ಗಿರಿಜಾ, ಮುಂತಾದವರು ಉಪಸ್ಥಿತರಿದ್ದರು. ಅಗಲಿದ ನಾಯಕರಿಗೆ ಶ್ರದ್ಧಾಂಜಲಿ ನಿರ್ಣಯವನ್ನು ಯೋಗೀಶ್ ಜಪ್ಪಿನಮೊಗರು ಮಂಡಿಸಿದರು. ಪ್ರಾರಂಭದಲ್ಲಿ CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರೆ, ಕೊನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ರವಿಚಂದ್ರ ಕೊಂಚಾಡಿ ವಂದಿಸಿದರು. #Modi #created #billionaires #starving #India #KPrakash #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಷೇರು ಮಾರುಕಟ್ಟೆಯಲ್ಲಿ ಲಾಭದ ಹೆಸರಿನಲ್ಲಿ ವಂಚನೆ ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ದೊಡ್ಡ ಪ್ರಮಾಣದಲ್ಲಿ ಲಾಭ ಬರಲಿದೆ ಎಂದು ನಂಬಿಸಿ ಆನ್ ಲೈನ್  ನಲ್ಲಿ ಕೋಟ್ಯಾಂತರ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನು ಬೆಂಗಳೂರು ನೈರುತ್ಯ ವಿಭಾಗದ ಪೊಲೀಸರು ಬೇಧಿಸಿ‌ 6 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಂಚನಾ ಜಾಲದಲ್ಲಿದ್ದ 8 ಆರೋಪಿಗಳನ್ನು ಬಂಧಿಸಿ ಇನ್ನೂ ಕೆಲವರ ಬಂಧನಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಅನಿತಾಹದ್ದಣ್ಣವರ್ ತಿಳಿಸಿದ್ದಾರೆ. ಬಂಧಿತರಿಂದ 19 ಲ್ಯಾಪ್ಟಾಪ್, 40 ಮೊಬೈಲ್, 11 ಪೆನ್ ಡ್ರೈವ್, 42 ಸಿಮ್ ಕಾರ್ಡ್, 4 ಐಪ್ಯಾಡ್, 2 ಹಾರ್ಡ್ ಡಿಸ್ಕ್, 5 ಸಿಪಿಯು, 13 ಸೀಲ್ ಗಳು, 10 ಮೆಮೊರಿ ಕಾರ್ಡ್ ಹಾಗೂ ವಿದೇಶಿ ಕರೆನ್ಸಿ, ಕರೆನ್ಸಿ ಕೌಟಿಂಗ್ ಮಷೀನ್ ಸೇರಿ 6 ಕೋಟಿ ಮೌಲ್ಯದ ಸ್ಥಿರಾಸ್ತಿ 50 ಹೆಚ್ಚು ದಾಖಲಾತಿಗಳನ್ನು ಜಪ್ತಿ ಮಾಡಿ ಪರಿಶೀಲನೆ ಕೈಗೊಳ್ಳಲಾಗಿದೆ ಎಂದರು. ಜಾಲದ ಆರೋಪಿಗಳು ಹೆಚ್ಚಿನ‌ ಲಾಭದ ಆಸೆ ತೋರಿಸಿ ಹೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುತ್ತಿದ್ದು, ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ದೇಶ ವಿದೇಶದ ಸಾರ್ವಜನಿಕರಿಗೆ ಹಣ ಹೂಡಿಕೆ ಮಾಡಲು ಆಮಿಷ ಒಡ್ದುತ್ತಿದ್ದರು. ಹೆಚ್ಚು ಲಾಭ ನೀಡುವುದು ಜನರಿಂದ ಹಣ ಸಂಗ್ರಹಿಸಿ ಆರೋಪಿಗಳು ವಂಚನೆ ಮಾಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದರು. ಕೆಂಗೇರಿ ಪೊಲೀಸರನ್ನೊಳಗೊಂಡ ವಿಶೇಷ ತಂಡಗಳು ಏಳು ಕಡೆ ದಾಳಿ ನಡೆಸಿ 8 ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಜಾಲದಿಂದ ವಂಚಿತರಾಗಿರುವ ಸಾರ್ವಜನಿಕರು ಕೆಂಗೇರಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಡಿಸಿಪಿ ಅನಿತಾ ಹದ್ದಣ್ಣವರ್ ಮನವಿ ಮಾಡಿದ್ದಾರೆ.  #Fraud #name #profit #stockmarket #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ಷೇರು ಮಾರುಕಟ್ಟೆಯಲ್ಲಿ ಲಾಭದ ಹೆಸರಿನಲ್ಲಿ ವಂಚನೆ FIR W ಸುಟ್ನಿ ಶ ಆಯರಿಯಲ್ಲಿ ನ Soqe httpsllmalgudiexpresscoin/ EXPRESS ಷೇರು ಮಾರುಕಟ್ಟೆಯಲ್ಲಿ ಲಾಭದ ಹೆಸರಿನಲ್ಲಿ ವಂಚನೆ FIR W ಸುಟ್ನಿ ಶ ಆಯರಿಯಲ್ಲಿ ನ Soqe httpsllmalgudiexpresscoin/ EXPRESS - ShareChat
#📜ಪ್ರಚಲಿತ ವಿದ್ಯಮಾನ📜 ಕುತೂಹಲಕ್ಕೆ ಕಾರಣವಾದ ಸಿಎಂ ಸಿದ್ದರಾಮಯ್ಯ ನಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ನಾಯಕತ್ವ ಬದಲಾವಣೆ ವಿಚಾರ ಪರ - ವಿರೋಧದ ಚರ್ಚೆಯಲ್ಲಿ ವಿವಾದವಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ನಡೆ ಕುತೂಹಲಕ್ಕೆ ಕಾರಣವಾಗಿದೆ. ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ಗಣತಿ ಕಾರ್ಯ ಸೇರಿದಂತೆ ಇತರೆ ವಿಚಾರಗಳ ಕುರಿತು ತಮ್ಮ ನಿವಾಸದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು ಅಧಿಕಾರಿಗಳಿಗೆ ನೀಡಿದ ಸಂದೇಶ ಈ ಕುರಿತಾದ ಚರ್ಚೆಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿ ಮತ್ತು ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಜರಿದ್ದ ಈ ಸಭೆಯಲ್ಲಿ ಮುಖ್ಯಮಂತ್ರಿಯಾಗಿ ತಾವು ರಾಜ್ಯದಲ್ಲಿ ಎರಡುವರೆ ವರ್ಷ ಅಧಿಕಾರ ಅವಧಿ ಪೂರ್ಣಗೊಳಿಸಿದ್ದೇನೆ. ಉಳಿದ ಎರಡೂವರೆ ವರ್ಷ ಅಧಿಕಾರದಲ್ಲಿ ರಾಜ್ಯದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ನೀಲ ನಕಾಶೆ ಸಿದ್ಧಪಡಿಸಿ ತರುವಂತೆ ಸೂಚನೆ ನೀಡಿದ್ದಾರೆ. ಮುಗಿದಿರುವ ಎರಡೂವರೆ ವರ್ಷಗಳ ಅಧಿಕಾರ ಅವಧಿಯಲ್ಲಿ ಬೆಂಗಳೂರು ನಗರದ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳಲ್ಲಿ ಸಾಕಷ್ಟು ತಪ್ಪುಗಳಾಗಿವೆ. ಇನ್ನು ಮುಂದೆ ಇಂತಹ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಿ ರಾಜ್ಯದ ಅಭಿವೃದ್ಧಿಯ ಚಿತ್ರಣ ಬದಲಿಸಬೇಕಿದೆ. ಅದಕ್ಕಾಗಿ ನಿಮ್ಮ ಎಲ್ಲರ ಸಹಕಾರ ಬೇಕು. ಎಲ್ಲರೂ ಕುಳಿತು ಚರ್ಚಿಸಿ ನೀಲ ನಕ್ಷೆಯನ್ನು ಸಿದ್ಧಪಡಿಸಬೇಕು ಎಂದು ಸಲಹೆ ನೀಡಿದ್ದಾರೆ. ಈ ಮೂಲಕ ಎರಡೂವರೆ ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸಿದ ನಂತರ ಸಿದ್ದರಾಮಯ್ಯ ಅಧಿಕಾರ ತ್ಯಾಗ ಮಾಡಲಿದ್ದಾರೆ ಎಂದು ಭಾವಿಸಿದ್ದ ವರ್ಗಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಅಧಿಕಾರ ಬದಲಾವಣೆಯಾಗಲಿದೆ ಎಂದು ರಾಜ್ಯ ಸರ್ಕಾರದ ಕೆಲವು ಉನ್ನತ ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡುತ್ತಿಲ್ಲ. ಮುಖ್ಯಮಂತ್ರಿಗಳ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳಿಗೆ ಉತ್ತರ ನೀಡುವ ರೀತಿಯಲ್ಲಿ ಸಿದ್ದರಾಮಯ್ಯ ಈ ಸಂದೇಶ ನೀಡಿದ್ದಾರೆ ಎಂದು ಅವರ ಆಪ್ತ ವಲಯಗಳು ತಿಳಿಸಿವೆ. ಇದು ಮಾತ್ರವಲ್ಲದೆ ರಾಜಕೀಯ ವಲಯದಲ್ಲೂ ಕೂಡ ಎರಡೂವರೆ ವರ್ಷಗಳ ಅಧಿಕಾರವಧಿ ಪೂರ್ಣಗೊಳಿಸಿದ ಸಿದ್ದರಾಮಯ್ಯ ತಮ್ಮ ಸ್ಥಾನ ತೊರೆಯಲಿದ್ದಾರೆ ಎಂದು ಚರ್ಚೆಗಳು ನಡೆದಿದ್ದವು. ಈ ಎಲ್ಲಾ ಚರ್ಚೆಗಳಿಗೆ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗಳಿಗೆ ಇಂತಹ ಸೂಚನೆ ನೀಡುವ ಮೂಲಕ ಸ್ಪಷ್ಟ ರಾಜಕೀಯ ಸಂದೇಶ ರವಾನಿಸಿದ್ದಾರೆ. ಪ್ರಮುಖವಾಗಿ ಬೆಂಗಳೂರಿನ ಅಭಿವೃದ್ಧಿ ಮತ್ತು ರಸ್ತೆಗಳ ಅವ್ಯವಸ್ಥೆ ಕುರಿತು ಮಾತನಾಡಿದ ಸಿದ್ದರಾಮಯ್ಯ, ಇಲ್ಲಿಯವರೆಗೆ ನಗರದ ಅಭಿವೃದ್ಧಿ ದೃಷ್ಟಿಯಿಂದ ಸ್ಪಷ್ಟ ನಿರ್ಧಾರಗಳು ಕೈಗೊಳ್ಳಲು ಸಾಧ್ಯವಾಗಿಲ್ಲ. ಇನ್ನು ಮುಂದೆ ತಾವೇ ನೇರವಾಗಿ ಬೆಂಗಳೂರು ನಗರದ ಉಸ್ತುವಾರಿ ನೋಡಿಕೊಳ್ಳುವ ಮೂಲಕ ಎಲ್ಲಾ ಲೋಪಗಳನ್ನು ಸರಿಪಡಿಸುತ್ತೇನೆ. ಅದಕ್ಕೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಹೇಳಿರುವುದಾಗಿ ಅವರ ಆಪ್ತ ಮೂಲಗಳು ತಿಳಿಸಿವೆ. #CM #Siddaramaiah #move #caused #curiosity #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಹಿರಿಯರ ಆದರ್ಶ ಮತ್ತು ಮೌಲ್ಯಗಳನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾಜಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಅಭಿಮತ ದಾವಣಗೆರೆ: ಸಮಾಜಕ್ಕೆ ಹಿರಿಯ ನಾಗರಿಕರ ಸಲಹೆ, ಸೂಚನೆ, ಮಾರ್ಗದರ್ಶನ ಅಗತ್ಯವಾಗಿದೆ. ಇಲ್ಲವಾದಲ್ಲಿ ಹಿರಿಯರ ಆದರ್ಶ ಮತ್ತು ಮೌಲ್ಯಗಳನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕಣ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸದ್ಯೋಜಾತ ಮಠದಲ್ಲಿ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಪಾಟಿಸಿ ಮಾತನಾಡಿದರು. ಈಗಿನ ಮಕ್ಕಳಿಗೆ ಆದರ್ಶ, ಮೌಲ್ಯಯುತ ಸಲಹೆಗಳು ಅಗತ್ಯವಾಗಿ ಹೇಳಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಹಿರಿಯ ನಾಗರಿಕರ ಮಾರ್ಗದರ್ಶನ ಮುಖ್ಯವಾದದ್ದು. ಹಿಂದೆ ಮನುಷ್ಯನ ಆಯಸ್ಸು 100 ರಿಂದ 125 ವರ್ಷಗಳಾಗಿತ್ತು, ಆದರೆ ಇಂದಿನ ಪೀಳಿಗೆಯವರ ಆಯಸ್ಸು 65 ರಿಂದ ಗರಿಷ್ಠ 80 ವರ್ಷ ಆಗಿದೆ. ಹಿರಿಯ ನಾಗರಿಕರು ಯೋಚನೆ ಮಾಡುವುದನ್ನು ಬಿಡಬೇಕು, ಜೊತೆಗೆ ದಿನ ನಿತ್ಯದ ಬದುಕಿನಲ್ಲಿ ಕ್ರೀಡೆಯಲ್ಲಿ ತೊಡಕೊಳ್ಳಬೇಕು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಈ ಹಿಂದೆ ಯಾವುದೇ ಪೊಲೀಸರ ರಕ್ಷಣೆ ಇಲ್ಲದೆ ಹಬ್ಬ ಆಚರಣೆ ಮಾಡುತ್ತಿದ್ದೆವು, ಆದರೆ ಇಂದು ಪೊಲೀಸರ ಮತ್ತು ಡ್ರೋಣ್ ಕಣ್ಗಾವಲಿನಲ್ಲಿ ಹಬ್ಬಗಳ ಆಚರಣೆ ಮಾಡುವಂತಾಗಿದೆ. ನಾವು ಸೌಹಾರ್ಧತಯುತವಾಗಿ ಹಬ್ಬ ಆಚರಣೆ ಮಾಡುವ ವ್ಯವಸ್ಥೆ ಆಗಬೇಕು ಮತ್ತು ಸರ್ವರಿಗೂ ಶಿಕ್ಷಣ, ಆರೋಗ್ಯ ಸೇವೆ ಉಚಿತವಾಗಿ ನೀಡಿದಾಗ ಮಾತ್ರ ದೇಶ ಹೆಚ್ಚು ಅಭಿವೃದ್ದಿಯಾಗಲು ಸಾಧ್ಯ ಎಂದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ ಮಾತನಾಡಿ, ಚಿಕ್ಕವರಿದ್ದಾಗ ಅಜ್ಜಿ, ತಾತ ಅವರುಗಳು ನಮಗೆ ಪಂಚತಂತ್ರ, ರಾಮಾಯಣ ಮತ್ತು ಮಹಾಭಾರತ ಕಥೆಗಳನ್ನು ಹೇಳುತ್ತಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ ಯಕ್ಷಗಾನ ಕೂಟಗಳಲ್ಲಿ ಮಕ್ಕಳೊಂದಿಗೆ ಭಾಗವಹಿಸುತ್ತಿದ್ದರು. ಇದರಿಂದ ಸಂಸ್ಕೃತಿ ಹೆಚ್ಚುತಿತ್ತು. ಆದರೆ ಇಂದು ಸಹಕುಟುಂಬ ವ್ಯವಸ್ಥೆಯಿಂದ ವಿಮುಖರಾಗಿ ವಯೋವೃದ್ಧರನ್ನು ನೋಡಿಕೊಳ್ಳಲು ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ ಎಂದರು. ಆದರೆ ಹಿರಿಯರೊಂದಿಗೆ ಇಂದಿನ ಯುವ ಪಿಳಿಗೆಗೆ ಮಾರ್ಗದರ್ಶನ ಮುಖ್ಯವಾಗಿದೆ. ಹಿರಿಯರು ಜೊತೆಗೆ ಇಲ್ಲದ ಕಾರಣ ನಾವು ಏನು ಮಾಡಬೇಕು ಮತ್ತು ಮಾಡಬಾರದು ಎಂಬುದು ತಿಳಿ ಹೇಳುವವರು ಯಾರೂ ಇಲ್ಲವಂತಾಗಿದೆ. ಆದ್ದರಿಂದ ಹಿರಿಯರು ತಮ್ಮ ಜೀವನ ಭದ್ರತೆ, ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು. ಹಿರಿಯ ವಕೀಲ ಬಳ್ಳಾರಿ ರೇವಣ್ಣ ಕಾನೂನು ಅರಿವು ಬಗ್ಗೆ ಉಪನ್ಯಾಸ ನೀಡಿದರು. ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮತ್ತು ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಡಾ.ಕೆ.ಕೆ.ಪ್ರಕಾಶ್, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗುರುಮೂರ್ತಿ, ಹಿರಿಯ ವೈದ್ಯರಾದ ಡಾ. ವೀರಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಯೋಗೇಂದ್ರಕುಮಾರ್ ಬಿ.ಯು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ್ ಹಾಗೂ ಇತರರು ಹಾಜರಿದ್ದರು. #situation #ideals #values ​ #elders #lost #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಹಾಸನಾಂಬ ಜಾತ್ರೆಯಲ್ಲಿ ವಿಐಪಿ ಸಂಪ್ರದಾಯಕ್ಕೆ ಬ್ರೇಕ್: ಕೃಷ್ಣ ಬೈರೇಗೌಡ ಬೆಂಗಳೂರು: ನಾಡಿನ ವಿಖ್ಯಾತ ಹಾಸನಾಂಭ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಕಾಸಸೌಧದಲ್ಲಿ ಹಾಸನ ಜಿಲ್ಲೆಯ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಾಸನಾಂಭ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಈ ವರ್ಷದಿಂದ ಈ ಸಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೆ, ಜನಸ್ನೇಹಿ ಹಾಸನಾಂಭ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು. “ಕಳೆದ ವರ್ಷ ಹಾಸನದಲ್ಲಿ ವಿಐಪಿ ಗಳ ಎಸ್ಕಾರ್ಟ್ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದು” ಎಂದು ಮಾಹಿತಿ ನೀಡಿದರು. ಮುಂದುವರೆದು, “ ಶಾಸಕರು, ಸಚಿವರು ನ್ಯಾಯಾಧೀಶರು, ಕ್ರೀಡಾಪಟುಗಳು, ಸಿನಿಮಾ ತಾರೆಯರು ಸೇರಿದಂತೆ ಉಳಿದ ಗಣ್ಯ ವ್ಯಕ್ತಿಗಳು ತಾವು ದೇವಾಲಯಕ್ಕೆ ಭೇಟಿ ನೀಡುವ ಬಗ್ಗೆ ಇ-ಮೇಲ್ ಅಥವಾ ಫೋನ್ ಕರೆಗಳ ಮೂಲಕ ಮೊದಲೇ ತಿಳಿಸಬೇಕು. ಮಾಹಿತಿ ನೀಡುವ ಗಣ್ಯವ್ಯಕ್ತಿಗಳನ್ನು ಜಿಲ್ಲಾಡಳಿತ ಏರ್ಪಡಿಸಿರುವ ವಾಹನದಲ್ಲಿ ದೇವಾಲಯಕ್ಕೆ ಕರೆತಂದು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಗಣ್ಯ ವ್ಯಕ್ತಿಗಳಿಗೆ ತಮ್ಮ ಕುಟುಂಬದ ನಾಲ್ಕು ಜನ ಸದಸ್ಯರನ್ನು ಜೊತೆಗೆ ಕರೆತರಲು ಅವಕಾಶ ನೀಡಲಾಗಿದೆ. ಆದರೆ, ಯಾವುದೇ ಖಾಸಗಿ ವಾಹನಗಳ ಮೂಲಕ ದೇವಾಲಯಕ್ಕೆ ಆಗಮಿಸಲು ಅವಕಾಶ ಇಲ್ಲ” ಎಂದು ತಿಳಿಸಿದರು. “ಇದಲ್ಲದೆ, 1000 ರೂ ಹಾಗೂ 300 ರೂ ಬೆಲೆಯ ಪಾಸ್ಗಳನ್ನೂ ವಿತರಿಸಲಾಗುವುದು. ಪಾಸ್ ಪಡೆದವರಿಗೆ ದೇವರ ದರ್ಶನದ ಜೊತೆಗೆ ಪ್ರಸಾದವನ್ನೂ ನೀಡಲಾಗುವುದು. ಒಂದು ಪಾಸ್ಗೆ ಒಬ್ಬರಿಗೆ ಮಾತ್ರ ಅವಕಾಶ ಇರಲಿದೆ. ಎಸ್ಕಾರ್ಟ್ನಲ್ಲಿ ಆಗಮಿಸುವವರಿಗೆ ಬೆಳಗ್ಗೆ 10.30 ರಿಂದ 12.30ರ ವರೆಗೆ ಅವಕಾಶ ಇರಲಿದೆ. ಪಾಸ್ ಪಡೆದವರಿಗೆ ಬೆಳಗ್ಗೆ 7.30 ರಿಂದ 10ರ ನಡುವೆ ಪ್ರವೇಶ ನೀಡಲಾಗುವುದು. ಒಂದು ದಿನಕ್ಕೆ 1000 ಪಾಸ್ಗಳನ್ನು ಮಾತ್ರ ವಿತರಿಸಲಿದ್ದು, ಸಮಯ ಮೀರಿ ಬಂದವರಿಗೆ ಅವಕಾಶ ಇರುವುದಿಲ್ಲ. ಇದಕ್ಕೆ ಎಲ್ಲರೂ ಸಹಕರಿಸಬೇಕು” ಎಂದು ಮನವಿ ಮಾಡಿದರು. “ಹಾಸನಾಂಭ ದೇವಾಲಯಕ್ಕೆ 2021 ರಲ್ಲಿ 1ಲಕ್ಷ ಜನ ಮಾತ್ರ ಭೇಟಿ ನೀಡಿದ್ದರು. ಆದರೆ, 2022 ರಲ್ಲಿ 3 ಲಕ್ಷ ಹಾಗೂ 2023 ರಲ್ಲಿ 6 ಲಕ್ಷ ಜನ ಭೇಟಿ ನೀಡಿದ್ದಾರೆ. ಕಳೆದ ವರ್ಷ 20 ಲಕ್ಷ ಜನ ಭೇಟಿ ನೀಡಿದ್ದಾರೆ. ಹೀಗಾಗಿ ಈ ವರ್ಷ 25ಲಕ್ಷ ಜನ ದೇವಿಯ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲಾ ಇಲಾಖೆಯನ್ನೂ ಒಳಗೊಂಡು ಸುಗಮ ತಯಾರಿಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ಅಕ್ಟೋಬರ್ 9 ರಿಂದಲೇ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರಲಿವೆ. ಮೂರು ವೇದಿಕೆ ಸಿದ್ದಪಡಿಸಲಾಗಿದ್ದು, ಒಂದು ವೇದಿಕೆಯಲ್ಲಿ ಜಾನಪದ ಜಾತ್ರೆ ನಡೆಸಲಾಗುವುದು. ಈ ವೇದಿಕೆಯಲ್ಲಿ ನಾಡಿನ ನಾನಾ ಭಾಗದ ಜಾನಪದ ಕಲಾವಿದರು ಆಗಮಿಸಿ ನೃತ್ಯ ಪ್ರದರ್ಶಿಸಲಿದ್ದಾರೆ. ಜಾನಪದವನ್ನು ಉಳಿಸಿ ಬೆಳೆಸುವ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಉಳಿದ ಎರಡು ವೇದಿಕೆಯಲ್ಲಿ ಸ್ಥಳೀಯ ಯುವಕ-ಯುವತಿಯರು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಭಕ್ತಾದಿಗಳಿಗೆ ಈ ವರ್ಷ ನೂತನ ಅನುಭವವಾಗಲಿದೆ. ಎಂದರು. ಇದರ ಜೊತೆಗೆ ಟೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನವೂ ಇರಲಿದೆ, ಸ್ತ್ರಿ ಶಕ್ತಿ ಸಂಘಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನೂ ಏರ್ಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಜೊತೆಗೆ ಮಾತನಾಡಿದ್ದು ಹಾಸನಾಂಭ ಟೂರ್ ಪ್ಯಾಕೇಜ್ ಸಹ ಆರಂಭಿಸುವ ಇರಾದೆ ಇದೆ ಎಂದರು. ಜನ ಸಂದಣಿ ನಿಯತ್ರಿಸುವ ಸಲುವಾಗಿ 2000 ಪೊಲೀಸರನ್ನು ನೇಮಕ ಮಾಡಲಾಗಿದೆ. 280 ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾ ಸಹ ಬಳಕೆಯಲ್ಲಿದ್ದು, ಎಲ್ಲವಕ್ಕೂ ಎಐ ತಂತ್ರಜ್ಞಾನ ಬಳಸಲಾಗಿದೆ. ಸ್ಥಳದಲ್ಲೇ ಕಂಟ್ರೋಲ್ ರೂಂ ನಿರ್ಮಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಲಾಗುವುದಿಲ್ಲ ಎಂದು ತಿಳಿಸಿದರು. #Break #VIP #tradition #Hassanamba #fair #KrishnaBairegowda #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ 9 ಮತ್ತು 10 ರಂದು ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. #Modern #Sheep #Goat #Farming #Training #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಸ್ವಸಹಾಯ ಸಂಘಗಳ ನಿರ್ವಹಣೆಯ ಅಕ್ಕ ಕಫೆ ಉದ್ಘಾಟನೆ ತರಕಾರಿ ಹೆಚ್ಚಿ ಅಡುಗೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಧಾರವಾಡ: ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಹೇಳಿದರು. ಜಿಲ್ಲಾ ಪಂಚಾಯತ ಹತ್ತಿರವಿರುವ ಕಟ್ಟಡದಲ್ಲಿ ಕಬ್ಬೆನೂರು ಗ್ರಾಮದ ಕಾಮದೇನು ಮಹಿಳಾ ಸ್ವಸಹಾಯ ಸಂಘ ಆರಂಭಿಸಿರುವ ಅಕ್ಕ-ಕಫೆ ಉದ್ಘಾಟಿಸಿ, ಮಾತನಾಡಿದರು. ಸದರಿ ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿದೆ. ಈ ನಿಟ್ಟಿನಲ್ಲಿ ಅಭಿಯಾನದಡಿ ಸ್ವಸಹಾಯ ಗುಂಪುಗಳ ಮಹಿಳೆಯರೆ ನಿರ್ವಹಿಸಲು ಅವಕಾಶವಾಗುವಂತೆ ಅಕ್ಕ-ಕಫೆ ರೂಪಿಸಲಾಗಿದ್ದು, ಮಹಿಳೆಯರ ಆರ್ಥಿಕ ಸಬಲಿಕರಣಕ್ಕೆ ಇದು ದೊಡ್ಡ ಕೊಡುಗೆ ನೀಡಲಿದೆ ಎಂದರು. ಮಹಿಳೆಯರನ್ನು ಸ್ವಸಹಾಯ ಗುಂಪುಗಳಡಿ ಸಂಘಟಿಸಿ, ಅವರಿಗೆ ಕೃಷಿ ಮತ್ತು ಕೃಷಿಯೇತರ ವಿಭಾಗಗಳಡಿ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಒದಗಿಸುವುದರ ಜೊತೆಗೆ ಅವರು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿ ಪಥದೊಂದಿಗೆ ಸ್ವಾವಲಂಬನೆಯ ಜೀವನವನ್ನು ನಿರ್ವಹಿಸುವಲ್ಲಿ ನಿರಂತರ ಬೆಂಬಲ ನೀಡಲಾಗುತ್ತಿದೆ ಎಂದರು. ಪ್ರಮುಖವಾಗಿ ಮಹಿಳೆಯರು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಂಡು ಜೀವನೋಪಾಯದೊಂದಿಗೆ ಸಬಲೀಕರಣದ ಬದುಕನ್ನು ರೂಪಿಸಿಕೊಳ್ಳುವಲ್ಲಿ ಅವಶ್ಯಕ ಸಾಮಥ್ರ್ಯಾಭಿವೃದ್ಧಿ ತರಬೇತಿಗಳನ್ನು ಏರ್ಪಡಿಸಿ, ಪ್ರತಿಯೊಬ್ಬ ಮಹಿಳೆಯನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸೂಕ್ತ ಅವಕಾಶಗಳನ್ನು ಕಲ್ಪಿಸಿ ನಿರಂತರವಾಗಿ ಸರ್ಕಾರ ಶ್ರಮಿಸುತ್ತಿದೆ ಎಂದರು. ಮಹಿಳೆಯರ ಜೀವನೋಪಾಯ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವಲ್ಲಿ ರಾಜ್ಯ ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಅಕ್ಕ-ಕಫೆ ಕಾರ್ಯಕ್ರಮವನ್ನು ಘೋಷಿಸಿದೆ. ಸರ್ಕಾರದ ಆದೇಶದಂತೆ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿರುಚಿಯಾಗಿ ಕೈಗೆಟಕುವ ದರದಲ್ಲಿ ಒದಗಿಸಲು ಮಹಿಳೆಯರೇ ನಡೆಸುವ 50 ಕೆಫೆ ಸಂಜೀವಿನಿ (ಅಕ್ಕ ಕೆಫೆ) ಕ್ಯಾಂಟೀನ್‍ಗಳನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ. ಅದರಂತೆ ಧಾರವಾಡ ಜಿಲ್ಲೆಯ ಜಿಲ್ಲಾ ಕೇಂದ್ರ ಸ್ಥಾನ ಮತ್ತು ಎಲ್ಲ ತಾಲೂಕು ಕೇಂದ್ರ ಸ್ಥಾನಗಳಲ್ಲಿ ಅಕ್ಕ ಕೆಫೆಯನ್ನು ಆರಂಭಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ನವಲಗುಂದ ಶಾಸಕರಾದ ಎನ್. ಎಚ್.ಕೋನರಡ್ಡಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ್ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಜಿ.ಪಂ. ಸಿಇಓ ಭುವನೇಶ ದೇವಿದಾಸ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ ಆರ್ಯ, ಪ್ರೋಬೆಷನರಿ ಐಎಎಸ್ ಅಧಿಕಾರಿ ರೀತಿಕಾ ವರ್ಮಾ, ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಹಾಗೂ ಕಾಮದೇನು ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ರಾಜಶ್ರೀ ಮಂಜುನಾಥ ಪವಾಡಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿವಿಧ ಸ್ವಸಹಾಯ ಸಂಘಗಳ ಸದಸ್ಯೆಯರು, ಸಾರ್ವಜನಿಕರು ಹಾಜರಿದ್ದರು. ಅಕ್ಕ ಕೆಫೆ: ಅಕ್ಕ ಕೆಫೆ ಕಾರ್ಯಕ್ರಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಕಾರ್ಯಕ್ರಮದ ಮುಖ್ಯ ಉದ್ದೇಶವು ಮಹಿಳಾ ಸ್ವ-ಸಹಾಯ ಸಂಘಗಳಿಗೆ ಆಹಾರ ಪೂರೈಕೆ ಕ್ಷೇತ್ರದಲ್ಲಿ ಸುಸ್ಥಿರ ಜೀವನೋಪಾಯ ಚಟುವಟಿಕೆಯನ್ನು ಒದಗಿಸುವುದಾಗಿದೆ. ಪ್ರಮುಖವಾಗಿ ಈ ಅಕ್ಕ ಕೆಫೆ ಚಟುವಟಿಕೆಯಡಿ ಉತ್ತಮ ಗುಣಮಟ್ಟದ ಶುಚಿ-ರುಚಿ ಪೌಷ್ಠಿಕ ಆಹಾರವನ್ನು ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಪೂರೈಸುವ ದೂರದೃಷ್ಠಿಯೊಂದಿಗೆ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಎರಡು ಅಕ್ಕ ಕೆಫೆಗಳ ಸ್ಥಾಪನೆಗಾಗಿ ಸ್ಥಳ ಗುರುತಿಸಿ ಸರಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಅದು ಅನುಮೋದನೆಗೊಂಡು ಅನುದಾನ ಬೀಡುಗಡೆಯಾಗಿದೆ. ಸದರಿ ಕೆಫೆ ಅನುಷ್ಠಾನಕ್ಕಾಗಿ ಜಿಲ್ಲಾ ಹಂತದಲ್ಲಿ ಜಂಟಿ ನಿರ್ದೇಶಕರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆರವರ ಅಧ್ಯಕ್ಷತೆಯಲ್ಲಿ, 7 ಜನರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಸದರಿ ಸಮಿತಿ ನಿರ್ಣಯದಂತೆ ಆಸಕ್ತ ಸ್ವ-ಸಹಾಯ ಸಂಘಗಳ ಆಯ್ಕೆಗಾಗಿ ಪ್ರಕಟಣೆ ಹೊರಡಿಸಿ, ಸರ್ಕಾರದ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ. ನಂತರ ಆಯ್ಕೆ ಗೊಂಡ ಸ್ವ-ಸಹಾಯ ಸಂಘಗಳಿಗೆ ಪಾಕ ಪ್ರಾವಿಣ್ಯತೆ, ಶುಚಿತ್ವ, ನೈರ್ಮಲ್ಯ, ನಾಯಕತ್ವ, ನಿರ್ವಹಣೆ ಕುರಿತು ತರಬೇತಿ ನೀಡಲಾಗುತ್ತದೆ. #Inauguration #AkkaCafe #run #SelfHelpGroups #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಬೆಳಗಾವಿ ನಗರಕ್ಕೆ 100 ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರಿಸಲಾಗುವುದು: ರಾಮಲಿಂಗಾರೆಡ್ಡಿ ಬೆಳಗಾವಿ: ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಗೆ 700 ಹೊಸ ಬಸ್ಸುಗಳು ಹಾಗೂ ಬೆಳಗಾವಿ ನಗರಕ್ಕೆ 100 ಎಲೆಕ್ಟ್ರಿಕ್ ಬಸ್ಸುಗಳನ್ನು ಮುಂದಿನ ದಿನಗಳಲ್ಲಿ ಸೇರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬೆಳಗಾವಿಯಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನೆರವೇರಿಸಿ ಮಾತನಾಡಿದರು. 5 ಎಕರೆ 5 ಗುಂಟೆ ಪ್ರದೇಶದಲ್ಲಿ ರೂ.24 ಕೋಟಿ ವೆಚ್ಚದಲ್ಲಿ ಎಲೆಕ್ಟ್ರಿಕ್ ಬಸ್ ಘಟಕವನ್ನು ಸಹ ಸ್ಥಾಪಿಸಲಾಗುತ್ತಿದೆ. ನೂತನ ಬಸ್ ನಿಲ್ದಾಣದಲ್ಲಿ 28 ಅಂಕಣಗಳು, 1365 ಸಾರಿಗೆ ಸರತಿಗಳು ನಿರ್ಗಮನವಾಗಲಿದ್ದು, 87 ಉಪನಗರ ಸ್ಥಳಗಳನ್ನು ಒಳಗೊಂಡಂತೆ ಒಟ್ಟು 143 ಸ್ಥಳಗಳಿಗೆ ಬಸ್ ಸೌಲಭ್ಯ ಒದಗಲಿದೆ. ಪ್ರತಿ ದಿನ ಸುಮಾರು 96,000 ಜನರು ಈ ನಿಲ್ದಾಣದ ಮೂಲಕ ಪ್ರಯಾಣಿಸಲಿದ್ದಾರೆ ಎಂದರು. ನಿಲ್ದಾಣದಲ್ಲಿ ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಮಳಿಗೆಗಳು, ಕುಡಿಯುವ ನೀರು, ಶೌಚಾಲಯಗಳು, ಶಿಶುಗಳಿಗೆ ಹಾಲುಣಿಸುವ ಕೊಠಡಿ, ವಿಕಲಚೇತನರ ರಾಂಪ್ ವ್ಯವಸ್ಥೆ, ಪೊಲೀಸ್ ಚೌಕಿ, ವಿಭಾಗೀಯ ಕಚೇರಿ, ಸಬ್-ವೇ ಸಂಪರ್ಕ, ಲಿಫ್ಟ್ ಹಾಗೂ ಎಸ್ಕಲೇಟರ್ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ, ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಹಾಗೂ ರಾಣಿ ಚೆನ್ನಮ್ಮ ವಿ.ವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು, ಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು. #electricbuses #added #Belgavi #city #RamalingaReddy #ಬೆಳಗಾವಿ #Belagavi #NWKRTC #Karnataka #Siddaramaiah #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಸಮೀಕ್ಷೆ ವೇಳೆ ಸಿಡಿಮಿಡಿಯಾದ ಡಿ ಕೆ ಶಿವಕುಮಾರ್ ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಗೊಂದಲಗಳಿಂದ ಸಾಕಷ್ಟು ಸುದ್ದಿಯಾಗುತ್ತಿದೆ.ಸಮೀಕ್ಷೆಯ ಸಮಯದಲ್ಲಿ ಕೇಳುವ ಪ್ರಶ್ನೆಗಳಿಗೆ ಆಕ್ಷೇಪ ವ್ಯಕ್ತವಾಗುತ್ತಿದ್ದು, ಇದರ ಅಗತ್ಯವಿದೆಯಾ ಎಂದು ಕೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಸಮೀಕ್ಷೆಗೆ ಬಂದ ಅಧಿಕಾರಿಗಳಿಗೆ ತಮ್ಮ ಪತ್ನಿಯ ಜೊತೆಗೂಡಿ ವಿವರಗಳನ್ನು ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್, ತಮ್ಮ ಬಳಿ ಇರುವ ಚಿನ್ನಾಭರಣ ಸೇರಿದಂತೆ ಹಲವು ವಿಷಯಗಳ ಕುರಿತು ಕೇಳಿದ ಮಾಹಿತಿಗೆ ಸಿಡಿಮಿಡಿಗೊಂಡರು. ಈ ಸಮೀಕ್ಷೆಯಲ್ಲಿ ಇಂತಹ ವೈಯಕ್ತಿಕ ವಿಷಯಗಳನ್ನು ಸಂಗ್ರಹಿಸುವ ಅಗತ್ಯವಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಅವರು ತಮ್ಮ ಕುಟುಂಬದ ಸಮೀಕ್ಷೆಗೆ ಕನಿಷ್ಠ ಒಂದು ಗಂಟೆ ವ್ಯಯಸಿದ್ದನ್ನು ಕಂಡು ಇಷ್ಟೊಂದು ಸಮಯ ತೆಗೆದುಕೊಂಡರೆ ಸಮೀಕ್ಷೆ ಯಾವಾಗ ಪೂರ್ಣಗೊಳ್ಳುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗಣತಿ ದಾರರಿಗೆ ತಮ್ಮ ವಿವರಗಳನ್ನು ನೀಡಿದ ಡಿ ಕೆ ಶಿವಕುಮಾರ್ ತಮ್ಮ ಜನ್ಮ ಜಿಲ್ಲೆ ಬೆಂಗಳೂರು ದಕ್ಷಿಣ ಎಂಕಾಮ್‌., ಶಿಕ್ಷಣ ಪಡೆದಿದ್ದೇನೆ ಎಂದರು. ಉದ್ಯೋಗದ ಕುರಿತ ಪ್ರಶ್ನೆಗೆ, 'ಕೃಷಿ ಎಂದು ಹಾಕಿ' ಎಂದರು. ಧರ್ಮ: ಹಿಂದೂ, ಜಾತಿ: ಒಕ್ಕಲಿಗ ಗೌಡ ಒಕ್ಕಲಿಗ(154), ಜಾತಿ ಪ್ರಯಾಣ ಪತ್ರ ಶಾಲೆಯಲ್ಲಿ ಪಡೆದಿದ್ದೇನೆ. 31ರ ವಯಸ್ಸಿನಲ್ಲಿ ಮದುವೆಯಾಗಿದ್ದೇನೆ. ಸರ್ಕಾರದ ಯಾವುದೇ ಸೌಲಭ್ಯ ಸಿಕ್ಕಿಲ್ಲ‌ ಎಂದು ಪ್ರಶ್ನೆಗಳಿಗೆ ಉತ್ತರ ನೀಡಿದರು. ಮೀಸಲಾತಿ ಸೌಲಭ್ಯವನ್ನು ಪಡೆದಿಲ್ಲ, ಉದ್ಯೋಗದ ಪ್ರಶ್ನೆಗೆ ಪಬ್ಲಿಕ್ ಸರ್ವಂಟ್,ಸ್ವ ಉದ್ಯೋಗ ಎಂದು ಬರೆದುಕೊಳ್ಳಿ ಎಂದು ಹೇಳಿದರು. ಕುಲ ಕಸುಬು ಕೃಷಿ ಸಾಗುವಳಿ ಎಂದ ಅವರು, ಆದಾಯದ ಬಗ್ಗೆ ಪ್ರಶ್ನೆ ಬಂದಾಗ ದೊಡ್ಡ ಸ್ಲಾಬ್ ಹಾಕು ಎಂದು ಹೇಳಿದರು. ರಾಜಕೀಯ ಪ್ರಾತಿನಿಧ್ಯದ ಪ್ರಶ್ನೆಗೆ 'ಮಂತ್ರಿ ಹಾಕು' ಎಂದು ಹೇಳಿದರು. ಈ ವೇಳೆ ಅಂಥ ಆಯ್ಕೆ ಇಲ್ಲ ಎಂದಿದ್ದಕ್ಕೆ, 'ಮಾಜಿ ಜಿಲ್ಲಾ ಪಂಚಾಯತ್ ಮೆಂಬರ್' ಎಂದು ಹಾಕುವಂತೆ ತಿಳಿಸಿದರು. ಮಾರ್ಕೆಟಿಂಗ್‌ ಸೊಸೈಟಿ, ಬೇಕಾದಷ್ಟು ನಿಗಮ ಮಂಡಳಿಗಿದ್ದೇನಲ್ಲ ಎಂದು ಹೇಳಿದರು. ಇಷ್ಟು ಪ್ರಶ್ನೆಗಳನ್ನು ಕೇಳಿದ ಬಳಿಕ, ಪ್ರಶ್ನೆಗಳು ತುಂಬಾ ಆದವು. ಇದೆಲ್ಲವೂ ಬಹಳ ಸಿಂಪಲ್‌ ಆಗಿ ಇರಬೇಕು ಎಂದು ಹೇಳಿದರು. ಕುಟುಂಬ ಹೊಂದಿರುವ ಆಸ್ತಿ 50-50 ಎಕರೆ ಹಾಕಿ ಎಂದು ಹೇಳಿದರು. ಬ್ಯುಸಿನೆಸ್‌ಗೋಸ್ಕರ ಸಾಲ ಇದೆ. ಬ್ಯಾಂಕ್‌ನಲ್ಲಿ ಮಾಡಿದ್ದೇವೆ. 25 ಹಸು ಇದೆ, ಎತ್ತು ಇದೆ, ಕುರಿ ಮೇಕೆ ಹತ್ತತ್ತು ಹಾಕು ಎಂದು ಹೇಳಿದರು. ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಇದೆ. ವಾಣಿಜ್ಯ ಕಟ್ಟಡ 4 ಹಾಕೊಳ್ಳಿ, ತೋಟದ ಮನೆ ಇದೆ. ಇತರ ಕಟ್ಟಡ ಪಟ್ಟಿಕೊಡಬೇಕು ಅಷ್ಟೇ ಎಂದರು. ಬಳಿಕ ಉಷಾ ಶಿವಕುಮಾರ್‌ಗೆ ಪ್ರಶ್ನೆಗಳನ್ನು ಕೇಳಲಾಯಿತು. ಮನೆ ಸಂಖ್ಯೆ 128 ಇರಬೇಕು. ಅಂಚೆ ವಿಳಾಸ ದೊಡ್ಡಾಲಹಳ್ಳಿ. ಎರಡು ಫಾರ್ಮ್‌ ಹೌಸ್‌, ಕಂಪ್ಯೂಟರ್, ಪ್ರಿಡ್ಜ್ ಒಂದ್ 5 ಹಾಕಿಕೊಳ್ಳಿ. ಎಸಿ ಇದೆ ಎಂದು ಹೇಳಿದರು. ಫ್ಯಾಕ್ಸ್‌ ಇದ್ಯಾ ಎನ್ನುವ ಪ್ರಶ್ನೆಗೆ, 'ಇದನೆಲ್ಲಾ ಯಾಕೆ ಹಾಕಿದ್ರಿ‌. ಈಗ ಯಾರದ್ದಿರುತ್ತೆ ಫ್ಯಾಕ್ಸ್' ಎಂದು ಉತ್ತರಿಸಿದರು. ಈ ವೇಳೆ ಗಣತಿ ದಾರರು ತಮ್ಮ ಬಳಿ ಚಿನ್ನಾಭರಣಗಳಿವೆಯಾ, ಇದ್ದರೆ ಎಷ್ಟಿದೆ ಎಂದು ಕೇಳಿದರು. ಪ್ರಶ್ನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಿವಕುಮಾರ್ ಜ್ಯುವೆಲರಿ ಇದೆಯಾ ಇಲ್ಲವಾ ಅನ್ನೋದು ನಿಮಗ್ಯಾಕೆ ತೀರಾ ಪರ್ಸನಲ್ ಡೀಟೆಲ್ಸ್‌ಗೆ ಹೋಗಬಾರದು. ನಮ್ಮ ಮನೆಯಲ್ಲೇ 1 ಗಂಟೆ ಆಯ್ತು ದಿನಕ್ಕೆ ಎಷ್ಟು ಸಮೀಕ್ಷೆ ಮಾಡ್ತೀರಾ ಎಂದು ಪ್ರಶ್ನಿಸಿದರು. #DKShivakumar #angry #during #survey #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat