Malgudi Express
ShareChat
click to see wallet page
@news007
news007
Malgudi Express
@news007
Malgudi Express official Page
#📜ಪ್ರಚಲಿತ ವಿದ್ಯಮಾನ📜 ಸೆರೆಯಲ್ಲಿರುವ ಗುಬ್ಬಚ್ಚಿ ಸೀನಾ ಬರ್ತ್ ಡೇ ಪಾರ್ಟಿ ವಿಡಿಯೋ ವೈರಲ್ ಬೆಂಗಳೂರು: ಒಂದಲ್ಲ ಒಂದು ಕಾರಣಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸುದ್ದಿಯಾಗುತ್ತಿದೆ. ಜೈಲಿನಲ್ಲಿರುವ ಕುಖ್ಯಾತ ಕೈದಿಗಳ ಸುದ್ದಿ ಒಂದು ಕಡೆಯಾದರೆ, ಇಲ್ಲಿನ ಸಿಬ್ಬಂದಿ ವಿರುದ್ಧ ಕೇಳಿ ಬರುವ ಆರೋಪಗಳು ಮತ್ತೊಂದು ಕಡೆ. ಇದರ ಜೊತೆಯಲ್ಲಿ ಕೈದಿಗಳಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಕೂಡ ಸಿಗುತ್ತದೆ ಎನ್ನುವ ಆರೋಪಗಳಿವೆ. ಇವುಗಳಿಗೆ ಪೂರಕವೆಂಬಂತೆ ಇದೀಗ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ರೌಡಿ ಗುಬ್ಬಚ್ಚಿ ಸೀನ ಕೇಕ್ ಕಟ್ ಮಾಡಿ ಹುಟ್ಟುಹಬ್ಬದ ಪಾರ್ಟಿ ಮಾಡಿರುವ ಘಟನೆ ನಡೆದಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಖ್ಯಾತ ರೌಡಿ ಶೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬದ ಪಾರ್ಟಿ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೇಬಿನ ಹಾರ ಹಾಕಿಕೊಂಡು ಜೈಲಿನ ಬ್ಯಾರಕ್‌ನಲ್ಲಿ ಗುಬ್ಬಚ್ಚಿ ಸೀನಾ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ. ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟೋರಿಯಸ್ ರೌಡಿ ಗುಬ್ಬಚ್ಚಿ ಸೀನ ಮೊಬೈಲ್‌ನಲ್ಲಿ ಹುಟ್ಟುಹಬ್ಬದ ಸಂಭ್ರಮದ ವಿಡಿಯೋ, ಪೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಜೈಲು ಅಧಿಕಾರಿಗಳು, ಸಿಬ್ಬಂದಿಯಿಂದ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿದೆ ಎಂಬುದನ್ನು ವೀಡಿಯೋ ಬಹಿರಂಗಪಡಿಸಿದೆ. #GubbacchiSeena #birthday #party #video #goes #viral #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#📜ಪ್ರಚಲಿತ ವಿದ್ಯಮಾನ📜 ಗ್ಯಾರಂಟಿಗಳನ್ನು ವಿರೋಧಿಸಲು ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಳಿಸಿದೆ: ಸುರ್ಜೇವಾಲ ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಹೆಚ್ಚಿಸಿವೆ. ಸರ್ಕಾರ ಮತ್ತು ಪಕ್ಷಕ್ಕೆ ಸಿಕ್ಕಿರುವ ಜನ ಮನ್ನಣೆಯನ್ನು ಸಹಿಸಲಾಗದೆ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಲು ಈಗ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಕಣಕ್ಕಿಳಿಸಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು 'ಸಾಮಾಜಿಕ ನ್ಯಾಯ'ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈ ಬದಲಾವಣೆಯನ್ನು ಸಹಿಸದ ಬಿಜೆಪಿ ಈಗ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಳಿಸಿದೆ ಎಂದರು. ಗ್ಯಾರಂಟಿ ಯೋಜನೆಗಳು ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಬಿಜೆಪಿ-ಜೆಡಿಎಸ್ ಮೈತ್ರಿಯ ದ್ವೇಷಕ್ಕೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿದೆ. ಇಂತಹ 'ಕುರುಡು ದೃಷ್ಟಿಯುಳ್ಳ ಪಕ್ಷಗಳು' ನಾಚಿಕೆಪಡಬೇಕು ಎಂದರು. ಗ್ಯಾರಂಟಿಗಳಿಂದ ಆದ ಪರಿವರ್ತನೆ ಮತ್ತು ಪ್ರಯೋಜನೆಗಳ ಯಶಸ್ಸು ಜನಸಾಮಾನ್ಯರ ಬದುಕಿನ ಮೇಲೆ ಆಗಿರುವ ಪರಿಣಾಮಗಳನ್ನು ವಿವರಿಸಿದ ಅವರು ,ಶಕ್ತಿ ಯೋಜನೆ ಮಹಿಳೆಯರ ಓಡಾಟ, ಸ್ವಾತಂತ್ರ್ಯ ಮತ್ತು ದುಡಿಯುವ ಸಾಮರ್ಥ್ಯವನ್ನು ಹೆಚ್ಚಿಸಿ 'ಹೊಸ ವಿಶ್ವ ದಾಖಲೆ' ಸೃಷ್ಟಿಸಿದೆ. ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ಇದುವರೆಗೆ 50,005 ಕೋಟಿ ರೂ. ಹಣ ವ್ಯಯಿಸಿದೆ‌ ಎಂದರು. ಗೃಹ ಜ್ಯೋತಿ ಮೂಲಕ 1.64 ಕೋಟಿ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಿದ್ದರಿಂದ ಶೇ. 90ರಷ್ಟು ಕುಟುಂಬಗಳು ಹಣ ಉಳಿಸಿ, ಅದನ್ನು 'ಮನೆಯ ಇತರ ಅಗತ್ಯಗಳಿಗೆ' ಬಳಸುತ್ತಿವೆ. ಈ ಯೋಜನೆಗಾಗಿ 18,139 ಕೋಟಿ ರೂ. ಹಣವನ್ನು ಕಾಂಗ್ರೆಸ್ ಸರ್ಕಾರ ವ್ಯಯಿಸಿದೆ.ಪಂಚಗ್ಯಾರಂಟಿ ಯೋಜನೆಗಳಿಗಾಗಿಯೇ ರಾಜ್ಯ ಸರ್ಕಾರ 97 ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು ವ್ಯಯಿಸುತ್ತಿರುವಾಗ ಆರ್ಥಿಕ ಪರಿಸ್ಥಿತಿ ಹೇಗೆ ಹದಗೆಟ್ಟಿದೆ ಎಂದರು. ಕಾಂಗ್ರೆಸ್‌ನ ಸಾಮಾಜಿಕ ನ್ಯಾಯದ ಉದ್ದೇಶವನ್ನು ಹತ್ತಿಕ್ಕುವ ಮೂಲಕ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲು ಬಿಜೆಪಿ-ಜೆಡಿಎಸ್ ಬಯಸುತ್ತಿವೆ ಎಂಬುದು ಪ್ರತಿ ಕನ್ನಡಿಗನಿಗೂ ತಿಳಿದಿದೆ. ಆದರೆ ನಮ್ಮ ಸರ್ಕಾರ ಕರ್ನಾಟಕದ ಪ್ರತಿಯೊಬ್ಬ ನಾಗರಿಕರ ಪರವಾಗಿದ್ದು, ಇಂತಹ ದುಷ್ಟ ಯತ್ನವನ್ನು ತಡೆಯುತ್ತೇವೆ ಎಂದರು. #BJP #fielded #HDDeveGowda #oppose #guarantees #RSSurjewala #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#ಬಸವ ಮೆಟ್ರೋ ಹೆಸರಿಗೆ ಶಿಫಾರಸು ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ: ಸಿದ್ದರಾಮಯ್ಯ ಬೆಂಗಳೂರು: ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ "ಬಸವ ಮೆಟ್ರೋ" ಎಂದು ಘೋಷಿಸಿ ಬಿಡುತ್ತಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಶ್ವಗುರು ಬಸವಣ್ಣ ಅವರನ್ನು "ಕರ್ನಾಟಕ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ 'ಬಸವ ಸಂಸ್ಕೃತಿ ಅಭಿಯಾನ-2025' ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು. ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ - ಬದ್ಧತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ - ಇಂದಿಗಲ್ಲ - ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ ಎಂದರು. ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ ಎಂದರು. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ. ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ ಎಂದರು. ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. #recommend #Center #name #nammametro #BasavaMetro #Siddaramaiah #Basaveshwara #malgudiexpress #malgudinews #news #TopNews
ಬಸವ ಮೆಟ್ರೋ ಹೆಸರಿಗೆ ಶಿಫಾರಸು - ShareChat
#ಹೈಕಮಾಂಡ್ ಮುಂದೆ ಡಿಕೆಶಿ ಅಸಮಾಧಾನ ಹೈಕಮಾಂಡ್ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿ ಕೆ ಶಿವಕುಮಾರ್ ಬೆಂಗಳೂರು: ಅಧಿಕಾರ ಹಸ್ತಾಂತರ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್ ಈ ವಿಚಾರವಾಗಿ ಹೈಕಮಾಂಡ್ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತಗಳ್ಳತನ ಕುರಿತು ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಮಟ್ಟದಲ್ಲಿ ನಡೆಸುತ್ತಿರುವ ಆಂದೋಲನದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿರುವ ಡಿ ಕೆ ಶಿವಕುಮಾರ್ ನಾಯಕತ್ವ ಕುರಿತಾಗಿ ಹಲವು ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಸಮಯದಲ್ಲಿ ಅಧಿಕಾರ ಹಂಚಿಕೆ ಕುರಿತಾಗಿ ಒಪ್ಪಂದ ಏರ್ಪಟ್ಟಿದೆ. ಅದರ ಅನ್ವಯ ಮೊದಲ ಎರಡೂವರೆ ವರ್ಷಗಳ ಅವಧಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲಿದ್ದಾರೆ. ಉಳಿದ ಎರಡೂವರೆ ವರ್ಷಕ್ಕೆ ಡಿ ಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ಮುಖ್ಯಮಂತ್ರಿಯನ್ನಾಗಿ ನೇಮಿಸಲಿದೆ ಎಂಬ ವಿಷಯ ಚರ್ಚೆಯಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣ ಅವರು ತಾವೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತೇನೆ. ಈ ರೀತಿಯ ಯಾವುದೇ ಒಪ್ಪಂದ ಏರ್ಪಟ್ಟಿಲ್ಲ ಎಂದು ಸ್ಪಷ್ಟನೆ ನೀಡುತ್ತಿದ್ದಾರೆ. ಇದರ ನಡುವೆ ಅಧಿಕಾರ ಹಂಚಿಕೆ ಕುರಿತಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಕಟ್ಟಪ್ಪಣೆ ವಿಧಿಸಿದೆ. ಆದರೂ ಡಿಸಿಎಂ ಅವರ ಪರವಾಗಿ ಕೆಲವು ಶಾಸಕರು ಮತ್ತು ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ಕೆಲವು ಸಚಿವರು ಸಿದ್ದರಾಮಯ್ಯ ಅವರ ಪರ ಹೇಳಿಕೆ ನೀಡುತ್ತಿದ್ದು ಗೊಂದಲಕ್ಕೆ ಕಾರಣವಾಗಿದೆ. ಇದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಹೈಕಮಾಂಡ್ ನಾಯಕತ್ವ ಕುರಿತು ಮಾತನಾಡಿದವರಿಗೆ ನೋಟಿಸ್ ಜಾರಿಗೊಳಿಸಿದೆ. ಈ ವಿಚಾರವಾಗಿ ವೇಣುಗೋಪಾಲ್ ಮತ್ತು ಸುರ್ಜೆವಾಲಾ ಅವರೊಂದಿಗೆ ಮಾತುಕತೆ ನಡೆಸಿದ ಡಿ ಕೆ ಶಿವಕುಮಾರ್ ಅಧಿಕಾರ ಹಸ್ತಾಂತರ ಮತ್ತು ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸಬೇಕು. ಈ ಬಗ್ಗೆ ಮುಖಂಡರು ಹೈಕಮಾಂಡ್ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಗೊತ್ತಾಗಿದೆ. ಪಕ್ಷದ ಸಂಘಟನಾ ಕಾರ್ಯದರ್ಶಿಗಳಾಗಿರುವ ವೇಣುಗೋಪಾಲ್ ಅವರಾಗಲಿ ಅಥವಾ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಸುರ್ಜೆವಾಲ ಅವರಾಗಲಿ ಸ್ಪಷ್ಟವಾಗಿ ಮಾತನಾಡಿ ನಾಯಕತ್ವ ಬದಲಾವಣೆ ಇದೆ ಅಥವಾ ಇಲ್ಲಾ ಎನ್ನುವುದನ್ನು ತಿಳಿಸಬೇಕು. ಅದನ್ನು ಬಿಟ್ಟು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಗೊಂದಲಕ್ಕೆ ಕಾರಣವಾಗುತ್ತಿದೆ. ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡುವ ಬದಲಿಗೆ ಸ್ಪಷ್ಟವಾಗಿ ನಿರ್ಧಾರ ಪ್ರಕಟಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ. ಇನ್ನು ನಾಯಕತ್ವ ವಿಚಾರವಾಗಿ ಮಾತನಾಡಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಹೈಕಮಾಂಡ್ ಹೇಳಿದೆ. ತಮ್ಮ ಪರವಾಗಿ ಮಾತನಾಡುವ ಶಾಸಕರು ಮತ್ತು ಮುಖಂಡರಿಗೆ ಶಿಸ್ತು ಸಮಿತಿ ನೋಟಿಸ್ ನೀಡುತ್ತಿದೆ. ಆದರೆ ಮುಖ್ಯಮಂತ್ರಿ ಪರವಾಗಿ ಮಾತನಾಡುವ ಯಾವುದೇ ನಾಯಕರಿಗೆ ನೋಟಿಸ್ ನೀಡುತ್ತಿಲ್ಲ. ಇದು ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ ಪರವಾಗಿ ಮಾತನಾಡಿದರೆ ಅಶಿಸ್ತು ಮುಖ್ಯಮಂತ್ರಿ ಪರವಾಗಿ ಮಾತನಾಡಿದರೆ ಶಿಸ್ತಿನ ಉಲ್ಲಂಘನೆ ಆಗುವುದಿಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಹೈಕಮಾಂಡ್ ಉತ್ತರ ನೀಡಬೇಕು ಎಂದು ಸುರ್ಜೇವಾಲಾ ಅವರಲ್ಲಿ ಕೇಳಿರುವುದಾಗಿ ಡಿಸಿಎಂ ಆಪ್ತ ಮೂಲಗಳು ತಿಳಿಸಿವೆ. ಶಿವಕುಮಾರ್ ಅವರ ಎಲ್ಲ ಮಾತುಗಳನ್ನು ಸಮಾಧಾನ ಚಿತ್ತದಿಂದ ಆಲಿಸಿದ ಇಬ್ಬರೂ ನಾಯಕರು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದು, ಅವರು ಹಿಂತಿರುಗಿದ ಬಳಿಕ ಈ ಬಗ್ಗೆ ಚರ್ಚೆ ನಡೆಸಿ ಸ್ಪಷ್ಟ ಉತ್ತರ ನೀಡುವುದಾಗಿ ಸಮಾಧಾನಪಡಿಸಿದರು ಎಂದು ಗೊತ್ತಾಗಿದೆ. #DKShivakumar #expressed #deep #dissatisfaction #highcommand #stance #malgudiexpress #malgudinews #news #TopNews
ಹೈಕಮಾಂಡ್ ಮುಂದೆ ಡಿಕೆಶಿ ಅಸಮಾಧಾನ - ShareChat
#📜ಪ್ರಚಲಿತ ವಿದ್ಯಮಾನ📜 SC ST ವರ್ಗದ ಮೂತ್ರಪಿಂಡ ಕಾಯಿಲೆಯ ನೆರವಿನ ಯೋಜನೆ ಪುನರಾರಂಭಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿಶೇಷ ಯೋಜನೆಯ ಅನುದಾನದಲ್ಲಿನ ಮೂತ್ರಪಿಂಡ ಕಾಯಿಲೆಯ ನೆರವಿನ ಯೋಜನೆಯನ್ನು ಮತ್ತೆ ಮುಂದುವರಿಸುವ ಅಗತ್ಯವಿದೆ. ಕರ್ನಾಟಕ ರಾಜ್ಯದಲ್ಲಿ 2004ರಲ್ಲಿ ಅಂದಿನ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮುಂಗಡಪತ್ರದಲ್ಲಿ ಮೀಸಲಿಟ್ಟ ವಿಶೇಷ ಯೋಜನೆಯ ಅನುದಾನದಲ್ಲಿ ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಜಾತಿಯ ಜನರಲ್ಲಿ ಮೂತ್ರಪಿಂಡವನ್ನು ಕಸಿ ಮಾಡಿಸಿಕೊಂಡವರೆಗೆ ಎರಡು ಲಕ್ಷ ರೂಪಾಯಿಗಳನ್ನು ಮತ್ತು ತಮ್ಮ ಸ್ವಂತ ಖರ್ಚಿನಲ್ಲಿ ಮೂತ್ರಪಿಂಡದ ಕಸಿ ಮಾಡಿಸಿಕೊಂಡವರಿಗೆ ಪ್ರತಿ ತಿಂಗಳು ಔಷಧಿಗಾಗಿ 10,000 ರೂ.ಗಳನ್ನ ನೀಡುವಂತಹ ಯೋಜನೆಯನ್ನು ಜಾರಿಗೊಳಿಸಿತ್ತು. ಈ ಯೋಜನೆ ಕೇವಲ ಬಿಪಿಎಲ್ ಕಾರ್ಡ್ ಹೊಂದಿರುವ ಜನರಿಗೆ ಮಾತ್ರ ಅನ್ವಯವಾಗುತ್ತಿತ್ತು. ಈ ಯೋಜನೆಯಿಂದ ಈ ವರ್ಗದ ಬಡವರು ತಮ್ಮ ರಕ್ತ ಸಂಬಂಧಿಗಳ ಮೂಲಕ ಮೂತ್ರಪಿಂಡವನ್ನು ಪಡೆದುಕೊಂಡು ಜೀವನ ನಡೆಸುತ್ತಿದ್ದರು ಮತ್ತು ತಮ್ಮ ಸ್ವಂತ ಖರ್ಚಿನಲ್ಲಿ ಮೂತ್ರಪಿಂಡ ಕಸಿ ಮಾಡಿಕೊಂಡು ಮುಂದಿನ ದಿನಗಳಲ್ಲಿ ಸರ್ಕಾರ ನೀಡುತ್ತಿದ್ದ ಸಹಾಯಧನದಿಂದ ಔಷಧಿಗಳನ್ನ ಪಡೆದುಕೊಳ್ಳುತ್ತಿದ್ದರು. ಮೂತ್ರಪಿಂಡದ ಕಾಯಿಲೆ ಮತ್ತು ಮೂತ್ರಪಿಂಡದ ಚಿಕಿತ್ಸೆ ಹಾಗೂ ಔಷಧಿಗಳ ಬೆಲೆ ತುಂಬಾ ದುಬಾರಿಯಾಗಿರುವುದರಿಂದ ಸರ್ಕಾರದ ನೆರವಿನ ಅವಶ್ಯಕತೆ ಈ ವರ್ಗದ ಬಡವರಿಗೆ ಹೆಚ್ಚಾಗಿ ಇರುತ್ತದೆ ಮತ್ತು ವಿಶೇಷವಾಗಿ ಈ ಯೋಜನೆಯ ಫಲಾನುಭವಿಗಳ ಸಂಖ್ಯೆಯು ಹೆಚ್ಚಿನ ಪ್ರಮಾಣದಲ್ಲಿ ದೊರಕುವುದಿಲ್ಲ. ಈಗ ರಾಜ್ಯ ಸರ್ಕಾರ ಈ ಯೋಜನೆಯನ್ನು ರದ್ದುಪಡಿಸಿದೆ. ಇದರಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಬಡವರು ಮೂತ್ರಪಿಂಡದ ಸಮಸ್ಯೆಯಿಂದ ನರಳುತ್ತಿರುವವರಿಗೆ ತಮ್ಮ ಚಿಕಿತ್ಸಾ ವೆಚ್ಚವನ್ನು ಮತ್ತು ಔಷಧಿಗಳನ್ನ ಖರೀದಿಸಲು ಕಷ್ಟವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮುಂಗಡಪತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿಶೇಷ ಯೋಜನೆಗಾಗಿ ಎಲ್ಲ ಸರ್ಕಾರಗಳಿಗಿಂತ ಹೆಚ್ಚಿನ ಅನುದಾನವನ್ನು ಮೀಸಲಿಟ್ಟಿದ್ದಾರೆ. ಈ ಹಣವನ್ನು ಕೆಲವು ನಿರುಪಯುಕ್ತ ಯೋಜನೆಗಳಿಗೆ ಕೇವಲ ಹಣವನ್ನು ಖರ್ಚು ಮಾಡಬೇಕು ಎನ್ನುವ ಕಾರಣಕ್ಕೆ ಆತುರ ಆತುರವಾಗಿ ಬಳಸುತ್ತಾರೆ. ಇದರ ಬದಲಿಗೆ ಅಮೂಲ್ಯವಾದ ಮಾನವ ಜೀವಗಳ ರಕ್ಷಣೆಗೆ ರೂಪಿತವಾಗಿರುವ ಯೋಜನೆಗಳನ್ನು ಪುನರ್ ಆರಂಭಿಸಿ. ಮಾನ್ಯ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರು ಈ ಸಂಬಂಧದಲ್ಲಿ ಇರುವಂತಹ ಸಮಸ್ಯೆಗಳನ್ನು ಅರಿತು ಮತ್ತಷ್ಟು ಜನ ಪರವಾದಂತಹ ನಿಟ್ಟಿನಲ್ಲಿ ಈ ಯೋಜನೆಯನ್ನು ಕೂಡಲೇ ಜಾರಿಗೊಳಿಸಿ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಜನರ ರಕ್ಷಣೆಗೆ ನಿಲ್ಲಬೇಕೆಂದು ಕೋರಿಕೊಳ್ಳುತ್ತೇನೆ. - ಕೆ ಎಸ್ ನಾಗರಾಜ್, ಬೆಂಗಳೂರು #Resume #SC #ST #category #kidney #disease #relief #scheme #ksnagaraj #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - Sc ST ವರ್ಗದ ಮೂತ್ರಪಿಂಡ ಕಾಯಿಲೆಯ ನೆರವಿನ ಯೋಜನೆ ಪುನರಾರಂಭಿಸಿ ಸುದ್ಟಿ & ಊ೦ರಯಲ್ಲಿ್ EXRRESS Please subscribe to Malgudi Express YouTube and Website Sc ST ವರ್ಗದ ಮೂತ್ರಪಿಂಡ ಕಾಯಿಲೆಯ ನೆರವಿನ ಯೋಜನೆ ಪುನರಾರಂಭಿಸಿ ಸುದ್ಟಿ & ಊ೦ರಯಲ್ಲಿ್ EXRRESS Please subscribe to Malgudi Express YouTube and Website - ShareChat
#📜ಪ್ರಚಲಿತ ವಿದ್ಯಮಾನ📜 ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ! ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ನಡೆದಿದೆ. ಈ ಘಟನೆ ಪ್ರಾಣಿ ಪ್ರಿಯರ ಆತಂಕಕ್ಕೆ ಕಾರಣವಾಗಿದೆ. ಘಟನೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಸಚಿವ ಈಶ್ವರ್ ಖಂಡ್ರೆ, ಹತ್ಯೆ ಪ್ರಕರಣದ ಬಗ್ಗೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ. ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಸೂಚನೆ ನೀಡಿದ್ದಾರೆ. ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. #Another #tiger #killed #Hanur #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#ಹಿರಿಯ ಕಥೆಗಾರ ಮೊಗಳ್ಳಿ ಗಣೇಶ್ ನಿಧನ #📜ಪ್ರಚಲಿತ ವಿದ್ಯಮಾನ📜 ನಿಗದಿತ ಅವಧಿಗಿಂತ ಮೊದಲು ಸಮೀಕ್ಷೆ ಪೂರ್ಣಗೊಳಿಸಿದ ಪಿ.ಎಫ್.ಗುಡೇನಕಟ್ಟಿ ಅವರಿಗೆ ಸನ್ಮಾನ ಧಾರವಾಡ: ನಿಗದಿತ ಅವಧಿಗಿಂತ ಮುಂಚಿತವಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯವನ್ನು ಗಣತಿದಾರರಾದ ಪಿ.ಎಫ್. ಗುಡೇನಕಟ್ಟಿ ಪೂರೈಸಿದ್ದಾರೆ. ಅವರಿಗೆ ವಾರ್ಡ್ ನಂ. 7 ರ 129 ಮನೆಗಳ ಗುರಿ ನೀಡಲಾಗಿತ್ತು. ಅದರಂತೆ ಮಹಾವೀರ ನಗರ, ರಾಮರಹೀಮ್ ಕಾಲನಿಯ ಕರವೀರ ಕಾಲನಿ, ಆಜಾದ ಕಾಲನಿ, ಸಾಯಿ ಲೇಔಟ್, ಚರಂತಿಮಠ ಗಾರ್ಡನ್ ಹತ್ತಿರದ ಬ್ಲಾಕ್ನಾಲ್ಲಿ ಒಟ್ಟು 134 ಮನೆಗಳ ಗಣತಿಯನ್ನು ಪೂರ್ಣಗೊಳಿಸಿ, ಶೇ.100 ರಷ್ಟು ಸಾಧನೆ ಮಾಡಿದ್ದಾರೆ. ಅವರ ಈ ಸಾಧನೆಗೆ ಮಹಾನಗರಪಾಲಿಕೆ ಧಾರವಾಡದ ಅಮೃತಮಹೋತ್ಸವ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಈ ವೇಳೆ ತಹಶೀಲ್ದಾರ್ ಡಾ.ಡಿ.ಎಚ್. ಹೂಗಾರ ಹಾಗೂ ಮಹಾನಗರ ಪಾಲಿಕೆ ವಲಯ ಸಹಾಯಕ ಆಯುಕ್ತ ಶಂಕರ ಪಾಟೀಲ, ಬಿಇಓ ಅಶೋಕ ಸಿಂದಗಿ, ಸಮನ್ವಯಾಧಿಕಾರಿ ಮಂಜು ಅಡವೇರ್ ಹಾಗೂ ಮೇಲ್ವಿಚಾರಕ ಜಿ.ಬಿ. ಶೆಟ್ಟರ್, ಸುಮಿತಾ ಹಿರೇಮಠ, ಎಸ್.ಬಿ.ಅರಮನಿ, ಎಂ.ಆರ್. ಕಬ್ಬೇರ, ಮಹೇಶ ಬಾಳಗಿ, ಆಸಿಫ್ ಸವಣೂರ ಹಾಗೂ ವಿ.ಎಂ. ಪಾಟೀಲ, ಇರ್ಫಾನ್ ಕವಲಗೇರಿ ಹಾಗೂ ಇತರರು ಹಾಜರಿದ್ದರು. #PFGudenakatti #Honored #completing #survey #before #scheduled #time #malgudiexpress #malgudinews #news #TopNews
ಹಿರಿಯ ಕಥೆಗಾರ ಮೊಗಳ್ಳಿ ಗಣೇಶ್ ನಿಧನ - ShareChat
#📜ಪ್ರಚಲಿತ ವಿದ್ಯಮಾನ📜 ಕತೆಗಳ ಮಯ್ಕಾರ ಮೊಗಳ್ಳಿ ಗಣೇಶ್ ನಿಧನರಾಗಿದ್ದಾರೆ... ಅವರ ಕತೆಗಳನ್ನು ಓದುತ್ತಾ ಅವರ 'ತಕರಾರು ' ( ವಿಮರ್ಶೆ) ಗಳಿಗೆ ಸ್ಪಂದಿಸುತ್ತಾ ಬೆಳೆದವರು ನಾವು. ಅವರ ದೇವರದಾರಿ ಕತಾ ಸಂಕಲನವನ್ನು ಅಹರ್ನಿಶಿ ಪ್ರಕಟಿಸಿತ್ತು.. ಅಗಲಿದ ಕತೆಗಳ ಮಾಯ್ಕಾರರಿಗೆ ಅಂತಿಮ ನಮನಗಳು.... - ಅಕ್ಷತಾ ಹುಂಚದಕಟ್ಟೆ, ಕವಿಗಳು #ಮೊಗಳ್ಳಿಗಣೇಶ್ #mogalliganesh #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat
#ಹಿರಿಯ ಕಥೆಗಾರ ಮೊಗಳ್ಳಿ ಗಣೇಶ್ ನಿಧನ ಕನ್ನಡ ವಿಶ್ವವಿದ್ಯಾಲಯದ ಇಪ್ಪತ್ತೈದು ವರುಷಗಳ ಹಿಂದೆ ಪಿಎಚ್.ಡಿ, ಮಾಡುತ್ತಿದ್ದಾಗ ಅವರ ಒಡನಾಟಕ್ಕೆ ಒಳಗಾಗಿದ್ದೆ. ರಾಜಪ್ಪ ದಳವಾಯಿಯವರ ಮೂಲಕ ಪರಿಚಯವಾದ ಅವರ ವ್ಯಕ್ತಿತ್ವ ಅವರ ಕತೆಗಳ‌ ಓದಿನಲ್ಲಿ ಲೀನವಾಗಿಸಿತ್ತು.. ಆ ನೆನಪುಗಳೊಂದಿಗೆ ಅಂತಿಮ ವಿದಾಯ. ಹೋಗಿ ಬನ್ನಿ ಸಾರ್. "ನನ್ನಜ್ಜನಿಗೊಂದಾಸೆಯಿತ್ತು" ಸದಾ ಕಾಡುವ ಕತೆ - ರವಿಕುಮಾರ್ ನೀಹ, ವಿಮರ್ಶಕರು #ಮೊಗಳ್ಳಿಗಣೇಶ್ #mogalliganesh #malgudiexpress #malgudinews #news #TopNews
ಹಿರಿಯ ಕಥೆಗಾರ ಮೊಗಳ್ಳಿ ಗಣೇಶ್ ನಿಧನ - Laa aka _u 85=-= |0 Laa aka _u 85=-= |0 - ShareChat
#📜ಪ್ರಚಲಿತ ವಿದ್ಯಮಾನ📜 ಬಿಜೆಪಿ ನಾಯಕರು ಧೈರ್ಯವಿದ್ದರೆ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಲಿ: ಎಂ ಬಿ ಪಾಟೀಲ್ ಬೆಂಗಳೂರು: ರಾಜ್ಯದ ಅತಿವೃಷ್ಟಿ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರದಿಂದ ನೆರವು ಪಡೆಯುವ ದೃಷ್ಟಿಯಿಂದ ಬಿಜೆಪಿ ನಾಯಕರು ದೆಹಲಿಗೆ ಹೋಗುವ ಧೈರ್ಯ ತೋರುತ್ತಿಲ್ಲ. ಅವರಿಗೆ ಭಯ ಕಾಡುತ್ತಿದೆ ಎಂದು ಬೃಹತ್ ಕೈಗಾರಿಕೆ ಮಂತ್ರಿ ಎಂಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಹಲವಾರು ಬಣಗಳಿವೆ. ಹೀಗಾಗಿ ರಾಜ್ಯ ನಾಯಕರು ದೆಹಲಿಗೆ ಹೋಗಲು ಹೆದರುತ್ತಿದ್ದಾರೆ. ಬಣ ರಾಜಕೀಯದಿಂದ ಬೇಸತ್ತಿರುವ ಬಿಜೆಪಿ ವರಿಷ್ಠರು ತಮ್ಮನ್ನು ಬಯ್ಯುತ್ತಾರೆ ಎಂದು ಹೆದರಿ ಯಾವುದೇ ನಾಯಕರು ದೆಹಲಿಗೆ ಹೋಗುತ್ತಿಲ್ಲ ಎಂದರು. ವರಿಷ್ಠರು ಬೈಯುತ್ತಾರೆ ಎಂಬ ಭಯದಿಂದ ದೆಹಲಿಗೆ ಹೋಗದೆ ಕರ್ನಾಟಕದಲ್ಲಿಯೇ ಸುತ್ತಾಡುತ್ತಾ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಿಕೊಂಡು ಕಾಲ ಕಳೆಯುತ್ತಿರುವ ಬಿಜೆಪಿ ನಾಯಕರು ಧೈರ್ಯವಿದ್ದರೆ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಲಿ ಎಂದು ಸವಾಲೆಸೆದರು. ಕೇಂದ್ರದ 14ನೇ ಹಣಕಾಸು ಆಯೋಗದಿಂದ ನ್ಯಾಯಯುತವಾಗಿ ರಾಜ್ಯಕ್ಕೆ ಬರಬೇಕಾದ 60 ರಿಂದ 70 ಸಾವಿರ ಕೋಟಿ ರೂಪಾಯಿ ಬಂದಿಲ್ಲ. ‌ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲಾಗಿದೆ ಇದರ ಅನ್ವಯ ಈ ಯೋಜನೆಗೆ ಘೋಷಣೆಯಾದ 5800 ಕೋಟಿ ರೂಪಾಯಿ ಕೂಡ ಬಂದಿಲ್ಲ ಎಂದರು. ರಾಜ್ಯಕ್ಕೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಗೊತ್ತಿರುವ ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ಹೋಗಿ ಈ ಹಣ ತರುವ ಧೈರ್ಯ ತೋರಿಸಲಿ. ಬಿಜೆಪಿ ನಾಯಕರು ಮೊದಲು ಈ ಹಣವನ್ನು ರಾಜ್ಯಕ್ಕೆ ತರುವ ಕೆಲಸ ಮಾಡಬೇಕು. ಪ್ರಸ್ತುತ 8500 ರೂಪಾಯಿ ಇರುವ ಪರಿಹಾರವನ್ನು 20,000 ರೂಪಾಯಿಗೆ ಹೆಚ್ಚಿಸಲು ಅವರು ಪ್ರಯತ್ನಿಸಬೇಕು. ರಾಜ್ಯದ ಬಿಜೆಪಿಯವರಿಗೆ ದೆಹಲಿಗೆ ಹೋಗೋ ತಾಕತ್ತು ಇಲ್ಲ, ಧೈರ್ಯವೂ ಇಲ್ಲ. ದೆಹಲಿಗೆ ಹೋದರೆ ಬೈಯ್ಯುತ್ತಾರೆ ಎಂಬ ಭಯವಿದೆ. ಹಾಗಾಗಿ, ಇಲ್ಲೇ ಸುಮ್ಮನೇ ಸುತ್ತಾಡುತ್ತಾರೆ ಎಂದರು. ನಾನು ಸಿದ್ದರಾಮಯ್ಯ ಈಗಾಗಲೇ ಪ್ರವಾಹ ಪ್ರದೇಶ ವೀಕ್ಷಣೆಮಾಡಿ ಪರಿಹಾರ ಕೊಡುತ್ತಿದ್ದೇವೆ. ಹೆಕ್ಟೇರ್‌ಗೆ 17,000 ರೂಪಾಯಿ ಘೋಷಣೆ ಮಾಡಿದ್ದೇವೆ. ಈಗ ಬಿಜೆಪಿಯವರು ಟ್ರೇನ್ ಹೋದ ಮೇಲೆ ಟಿಕೆಟ್ ತೆಗೆಸುತ್ತಿದ್ದಾರೆ ಎಂದರು. #BJP #leaders #courage #Delhi #meet #highcommand #MBPatil #malgudiexpress #malgudinews #news #TopNews
📜ಪ್ರಚಲಿತ ವಿದ್ಯಮಾನ📜 - ShareChat