Happy birthday APJ Kalam
#

Happy birthday APJ Kalam

ರಾಷ್ಟ್ರಪತಿಯಾಗಿ ಸಂಪಾದಿಸಿ ಕಲಾಂರವರು ಭಾರತದ 11ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. 2002ರ ರಾಷ್ತ್ರಪತಿ ಚುನಾವಣೆಯಲ್ಲಿ ಲಕ್ಷ್ಮೀ ಸೆಹೆಗಲ್ ವಿರುದ್ಧ ೧೦೭,೩೬೬ ಮತಗಳ ಮುನ್ನಡೆಯಲ್ಲಿ ಗೆದ್ದರು. 25 ಜುಲೈ 2002ರಿಂದ 25 ಜುಲೈ 2007ರವರೆಗೆ ರಾಷ್ಟಪತಿಯಾಗಿ ಸೇವೆ ಸಲ್ಲಿಸಿದರು.[೨]ಅ ಸರಳತೆ, ಪ್ರಾಮಾಣಿಕತೆ, ಮತ್ತು ಮೇಧಾವಿತನದ ಸಾಕಾರದಂತಿರುವ ಕಲಾಂ ಅವರು ರಾಷ್ಟ್ರಪತಿ ಹುದ್ದೆಯ ಘನತೆಯನ್ನು ಹೆಚ್ಚಿಸಿದರು. ಜನಸಾಮಾನ್ಯರ ರಾಷ್ಟ್ರಪತಿ ಎಂಬ ಕೀರ್ತಿಗೆ ಪಾತ್ರರಾದರು. ಸ್ವತಃ ಬ್ರಹ್ಮಚಾರಿ ಆದ ಇವರಿಗೆ ಮಕ್ಕಳೆಂದರೆ ಬಹು ಪ್ರೀತಿ. ಮಕ್ಕಳೊಂದಿಗೆ ಬೆರೆತು ಉಪಯುಕ್ತ ಸಲಹೆ ಸೂಚನೆ ನೀಡುವುದು ಇವರ ಪ್ರಿಯ ಹವ್ಯಾಸ.
1.3k ವೀಕ್ಷಿಸಿದ್ದಾರೆ
1 ವರ್ಷಗಳ ಹಿಂದೆ
#

Happy birthday APJ Kalam

ಬಾಲ್ಯ ಮತ್ತು ವಿದ್ಯಾಭ್ಯಾಸ ಸಂಪಾದಿಸಿ ಅವುಲ್ ಫಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಂ ಅವರು ತಮಿಳುನಾಡು ರಾಜ್ಯದ |ರಾಮೇಶ್ವರಂನಲ್ಲಿ, ೧೫ ಅಕ್ಟೋಬರ್ ೧೯೩೧ ರಂದು ತಮಿಳು ಮುಸ್ಲಿಂ ಕುಟುಂಬದಲ್ಲಿ ಜನಿಸಿದರು. ಅವರ ತಂದೆಯ ಹೆಸರು ಜೈನುಲಬ್ದೀನ್, ಅವರು ದೋಣಿ ಮಾಲೀಕರಾಗಿದ್ದರು. ತಾಯಿ ಅಶಿಮಾ ಗೃಹಿಣಿಯಾಗಿದ್ದರು. ಕಲಾಂ ಅವರ ತಂದೆ, ಈಗ ನಿರ್ನಾಮವಾದ ಧನುಷ್ಕೋಡಿ ಮತ್ತು ರಾಮೇಶ್ವರಂ ನಡುವೆ ತಮ್ಮ ದೋಣಿಯಲ್ಲಿ ಹಿಂದು ಭಕ್ತಾದಿಗಳನ್ನು ಕರೆದುಕೊಂಡು ಹೋಗುತ್ತಿದ್ದರು. *ಕಲಾಂ ಅವರು ಕುಟುಂಬದ ನಾಲ್ಕು ಜನ ಸಹೋದರರು ಮತ್ತು ಒಬ್ಬ ಸಹೋದರಿಯಲ್ಲಿ ಅತ್ಯಂತ ಕಿರಿಯರಾಗಿದ್ದರು. ಅವರು ಬಡ ಹಿನ್ನೆಲೆಯಿಂದ ಬಂದವರು ಮತ್ತು ತನ್ನ ಕುಟುಂಬಕ್ಕೆ ಆರ್ಥಿಕವಾಗಿ ಬೆಂಬಲಿಸುವ ಸಲುವಾಗಿ, ಕಿರಿಯ ವಯಸ್ಸಿನಲ್ಲೇ ಕೆಲಸ ಆರಂಭಿಸಿದರು. ತಮ್ಮ ತಂದೆ ಗೆ ಆರ್ಥಿಕವಾಗಿ ಸಹಾಯ ಮಾಡಲು, ಅವರು ಶಾಲೆಯ ನಂತರ ತಮ್ಮ ಸಂಸೂದ್ದಿನ ಕಲಾಂ ಜೊತೆಗೆ ಪತ್ರಿಕೆಗಳನ್ನು ವಿತರಣೆ ಮಾಡುತ್ತಿದ್ದರು. ಇವರ ಬಾಲ್ಯವು ಬಹಳ ಬಡತನದಿಂದ ಕೂಡಿತ್ತು. ಮುಂಜಾನೆ ೪:೦೦ ಘಂಟೆಗೆ ಎದ್ದು ದಿನದ ಪಾಠಗಳನ್ನು ಓದಿ ಶಾಲೆಗೆ ಹೋಗುತ್ತಿದ್ದರು. ಅವರು ಶಾಲೆಯಲ್ಲಿದ್ದಾಗ ಒಬ್ಬ ಸಾಧಾರಣ ವಿಧ್ಯಾರ್ಥಿಯಾಗಿದ್ದರು, ಆದರೆ ಚುರುಕಾದ ಮತ್ತು ಕಠಿಣ ಪರಿಶ್ರಮ ಪಡುವ ವಿಧ್ಯಾರ್ಥಿಯಾಗಿದ್ದರು. ಅವರಿಗೆ ಗಣಿತದಲ್ಲಿ ವಿಶೇಷ ಆಸಕ್ತಿ ಇತ್ತು, ಅವರು ಗಣಿತವನ್ನು ಗಂಟೆಗಳ ಅಧ್ಯಯನ ಮಾಡುತ್ತಿದ್ದರು. ಅವರು ರಾಮನಾಥಪುರಂ ಶ್ವಾರ್ಟ್ಜ್ ಮೆಟ್ರಿಕ್ಯುಲೇಷನ್]ಶಾಲೆಯಲ್ಲಿ ಶಿಕ್ಷಣ ಮುಗಿಸಿದ ನಂತರ ತಿರುಚಿರಾಪಳ್ಳಿ|ತಿರುಚಿರಾಪಳ್ಳಿಯಲ್ಲಿ ಕಲಾಂ ಸೇಂಟ್ ಜೋಸೆಫ್ಸ್ ಕಾಲೇಜಿಗೆ ಸೇರಿಕೊಂಡರು. ೧೯೫೪ರಲ್ಲಿ ಮದ್ರಾಸ್‌ ವಿಶ್ವವಿದ್ಯಾನಿಲಯ|ಮದ್ರಾಸ್ ವಿಶ್ವವಿದ್ಯಾನಿಲಯದಿಂದ ಭೌತಶಾಸ್ತ್ರದಲ್ಲಿ ಪದವಿಯನ್ನು ಪಡೆದರು. ಕೋರ್ಸ್ ಕೊನೆಯಲ್ಲಿ ಅವರಿಗೆ ವಿಷಯದ ಬಗ್ಗೆ ಉತ್ಸಾಹ ಕಡಿಮೆಯಾಗುತ್ತಾ ಬಂತು ಮತ್ತು ವಿಷಯವನ್ನು ನಾಲ್ಕು ವರುಷಗಳ ಕಾಲ ಅಧ್ಯಯನ ಮಾಡಿದಕ್ಕೆ ಆಮೇಲೆ ಪಶ್ಚಾತಾಪ ಪಟ್ಟರು. ಅವರು ಮದ್ರಾಸ್ ತಾಂತ್ರಿಕ ಮಹಾವಿದ್ಯಾಲಯದ ಲ್ಲಿ ಅಂತರಿಕ್ಷಯಾನ ಇಂಜಿನಿಯರಿಂಗ್‌|ಅಂತರಿಕ್ಷಯಾನ ಇಂಜಿನಿಯರಿಂಗ್ ಓದಲು ಮದ್ರಾಸ್ ಗೆ ತೆರಳಿದರು. ಕಲಾಂ ಅವರು ಕೆಲಸ ಮಾಢುತಿದ್ದಾಗ ಹಿರಿಯ ವರ್ಗದ ಯೋಜನೆಯ ಪ್ರಗತಿ ಬಗ್ಗೆ ಡೀನ್ ಅವರು ಅತೃಪ್ತಿ ವ್ಯಕ್ತಪಡಿಸಿ, ಇನ್ನೂ ಮೂರು ದಿನಗಳಲ್ಲಿ ಯೋಜನೆ ಮುಗಿಸದಿದ್ದರೆ, ಅವರ ವಿದ್ಯಾರ್ಥಿವೇತನ ರದ್ದು ಮಾಡುವ ಬೆದೆರಿಕೆ ಹಾಕಿದರು, ಕಲಾಂ ಅವರು ಡೀನ್ ಕೊಟ್ಟ ಗಡುವಿನಲ್ಲಿ ಯೋಜನೆ ಪೂರೈಸಿದರು. ಅವರ ಕೆಲಸದಿಂದ ಪ್ರಭಾವಿತರಾದ ಡೀನ್ ಅವರು "ನಾನು ನಿನ್ನ ಮೇಲೆ ಹೆಚ್ಚು ಒತ್ತಡ ಹಾಕಿ ಕಠಿಣವಾದ ಗಡುವಿನಲ್ಲಿ ಕೆಲಸ ಪೂರೈಸಲು ಹೇಳಿದ್ದೆ" ಎಂದು ಹೇಳಿದರು. ಎಂಟು ಸ್ಥಾನಗಳು ಖಾಲಿ ಇದ್ದ ಭಾರತೀಯ ವಾಯುಪಡೆಯಾ ಅರ್ಹತಾ ಸುತ್ತಿನಲ್ಲಿ ಒಂಬತ್ತನೆಯ ಸ್ಥಾನ ಪಡೆದದ್ದರಿಂದ, ಯುದ್ದ ವಿಮಾನ|ಯುದ್ದ ವಿಮಾನದ ಚಾಲಕನಾಗುವ ಅವರ ಕನಸಿನ ಅವಕಾಶ ತಪ್ಪಿಹೋಯಿತು
1.5k ವೀಕ್ಷಿಸಿದ್ದಾರೆ
1 ವರ್ಷಗಳ ಹಿಂದೆ
ಬೇರೆ Appsಗೆ ಶೇರ್ ಮಾಡಲು
Facebook
WhatsApp
ಲಿಂಕ್ ಕಾಪಿ ಮಾಡಿ
ಡಿಲೀಟ್
Embed
ಈ ಪೋಸ್ಟ್ ರಿಪೋರ್ಟ್ ಮಾಡಲು ಕರಣ...
Embed Post