Edu ವೀರ
31K views •
ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, Central Board of Direct Taxation ಮಾಹಿತಿ ಆಧಾರದ ಮೇಲೆ ರಾಜಧಾನಿ ಬೆಂಗಳೂರೊಂದರಲ್ಲೇ ಲಕ್ಷಾಂತರ ಕಾರ್ಡ್ಗಳು ರದ್ದಾಗುವ ಸಾಧ್ಯತೆ ಇದೆ. ಆಹಾರ ಇಲಾಖೆಗೆ ಕಳೆದ ತಿಂಗಳು ದೊರೆತಿರುವ ಟ್ಯಾಕ್ಸ್ ರಿಪೋರ್ಟ್ ಆಧಾರದಲ್ಲಿ, ತೆರಿಗೆ ಕಟ್ಟುತ್ತಿದ್ದರೂ ಪಡೆದಿರುವ ಬಿಪಿಎಲ್ ಕಾರ್ಡ್ಗಳು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆಯಾಗಲಿವೆ. ಆಹಾರ ಇಲಾಖೆಯ ರಾಜಾಜಿನಗರ ಜಂಟಿ ಆಯುಕ್ತರ ವ್ಯಾಪ್ತಿಯಲ್ಲಿಯೇ 13,329 ಬಿಪಿಎಲ್ ಕಾರ್ಡ್ಗಳು ರದ್ದಾಗಿದ್ದು, ಅವನ್ನು ಎಪಿಎಲ್ ಆಗಿ ಪರಿವರ್ತಿಸಲಾಗಿದೆ. ಈ ಹಿನ್ನಲೆ ರಾಜಾಜಿನಗರದ ಆಹಾರ ಇಲಾಖೆ ಮುಂದೆ ಜನರು ಜಮಾಯಿಸಿದ್ದಾರೆ. ಕಳೆದ ತಿಂಗಳು ರೇಷನ್ ಸಿಕ್ಕಿತ್ತು, ಆದ್ರೆ ಈ ತಿಂಗಳು ನಮಗೆ ರೇಷನ್ ನೀಡಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರೋ ಮಹಿಳೆಯೋರ್ವರು, ನಾವು ಟ್ಯಾಕ್ಸ್ ಕಟ್ಟುತ್ತಿಲ್ಲ, ಮಗಳು ಕೆಲಸ ಮಾಡುತ್ತಿದ್ದಳು. ಆದರೆ ಈಗ ಅವಳನ್ನು ಮದುವೆ ಮಾಡಿ ಕೊಟ್ಟಿದ್ದೇವೆ. ಹೀಗಿದ್ದರೂ ನಮಗೆ ರೇಷನ್ ನೀಡುತ್ತಿಲ್ಲ ಎಂದು ಅಲವತ್ತುಕೊಂಡಿದ್ದಾರೆ. #🔴'BPL ಕಾರ್ಡ್ ರದ್ದು' ಮಾಡಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ❌
254 likes
15 comments • 252 shares