ನವರಾತ್ರಿಯ ಆರನೇ ದಿನ
ನವರಾತ್ರಿಯ ನವದುರ್ಗೆಯರಲ್ಲಿ ಆರನೆಯ ದಿನದ ದೇವಿ ಕಾತ್ಯಾಯನಿ: ‘ಕಾತ್ಯಾಯನಸ್ಯ ಅಪತ್ಯಂ ಸ್ತ್ರೀ ಕಾತ್ಯಾಯನಿ|’ (ಕಾತ್ಯಾಯನನ ಮಗಳು ಕಾತ್ಯಾಯನಿ) ‘ಅಯನ’ ಎಂದರೆ ‘ಹಲವಾರು ನಕ್ಷತ್ರ ಸಮೂಹಗಳಿಂದ ಯುಕ್ತವಾಗಿರುವ ಭಾಗ’. ಕಾತ್ಯಾಯನ ಋಷಿಗಳು ಇಂತಹ ಒಂದು ಅಯನದ ಪಾಲಕರಾಗಿದ್ದರು. ಒಮ್ಮೆ ಕಾತ್ಯಾಯನರ ಅಯನಗಳಲ್ಲಿನ ದೇವತೆಗಳ ಮೇಲೆ (ತೇಜಸ್ಸಿನ ಮೇಲೆ) ಅವರದ್ದೇ ಅಯನದಲ್ಲಿನ ಅಯೋಗ್ಯ ಸ್ಪಂದನಲಹರಿಗಳ ಒಂದು ಶಕ್ತಿಯುತ ಸಮೂಹವು ಆಕ್ರಮಣ ಮಾಡಿತು. ಘರ್ಷಣೆಯಿಂದ ಬಹುದೊಡ್ಡ ಉತ್ಪಾತವಾಗುವ ಸಮಯ ಬಂದಿತು. ಆಗ ಕಾತ್ಯಾಯನ ಋಷಿಗಳ ಆಶ್ರಮದಲ್ಲಿ ಸೂಕ್ಷ್ಮಾತಿಸೂಕ್ಷ್ಮ ಶಕ್ತಿಲಹರಿಗಳ ಒಂದು ಅಂಶವು ಒಬ್ಬ ಚಿಕ್ಕ ಬಾಲಕಿಯ ಆಕಾರದಲ್ಲಿ ಪ್ರವೇಶಿಸಿತು. ಈ ಬಾಲಕಿಯನ್ನು ಕಾತ್ಯಾಯನ ಋಷಿಗಳು ತಮ್ಮ ಸಂತಾನವೆಂದು ಪರಿಗಣಿಸಿದರು; ಆದುದರಿಂದ ಅವಳು ‘ಕಾತ್ಯಾಯನಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಹೊಂದಿದಳು. ಕಾತ್ಯಾಯನಿಯು ಶಕ್ತಿಯುತ ಅಯೋಗ್ಯ ಸ್ಪಂದನಲಹರಿಗಳನ್ನು ಯೋಗ್ಯ ಸ್ಪಂದನಲಹರಿಗಳನ್ನಾಗಿ ಪರಿವರ್ತಿಸಿ ದೇವತೆಗಳಿಗೆ (ತೇಜಸ್ಸಿಗೆ) ಸಹಾಯ ಮಾಡಿದಳು.
#

ನವರಾತ್ರಿಯ ಆರನೇ ದಿನ

ನವರಾತ್ರಿಯ ಆರನೇ ದಿನ - ShareChat
3.5k ವೀಕ್ಷಿಸಿದ್ದಾರೆ
1 ವರ್ಷಗಳ ಹಿಂದೆ
ಬೇರೆ Appsಗೆ ಶೇರ್ ಮಾಡಲು
Facebook
WhatsApp
ಲಿಂಕ್ ಕಾಪಿ ಮಾಡಿ
ಡಿಲೀಟ್
Embed
ಈ ಪೋಸ್ಟ್ ರಿಪೋರ್ಟ್ ಮಾಡಲು ಕರಣ...
Embed Post