#😭ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ನಟ ನಿಧನ 💔 ʼಕೆಜಿಎಫ್ ಚಾಚಾʼ ಎಂದೇ ಖ್ಯಾತರಾಗಿದ್ದ ಕನ್ನಡದ ಖಳನಟ ಹರೀಶ್ ರಾಯ್ (Harish Rai Death) ನಿಧನರಾಗಿದ್ದಾರೆ. ಅವರು ಬಹು ಕಾಲದಿಂದ ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್ ಕ್ಯಾನ್ಸರ್ (Thyroid Cancer) ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.ಅವರಿಗೆ 55 ವರ್ಷ ವಯಸ್ಸಾಗಿತ್ತು.
ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಜಿಎಫ್ ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.ತಮಿಳಿನಲ್ಲೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂಡರ್ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್ವುಡ್ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್ ೧ ಹಾಗೂ ಕೆಜಿಎಫ್ ಚಾಪ್ಟರ್ ೨ರಲ್ಲಿ ಅಭಿನಯಿಸಿದ್ದಾರೆ.
ಹರೀಶ್ ರಾಯ್ ಅವರು ಸೋಶಿಯಲ್ ಮೀಡಿಯಾ ಅಕೌಂಟ್‌ನಲ್ಲಿ ತಮ್ಮ ಮಚಿಕಿತ್ಸೆಯ ವಿಡಿಯೋವನ್ನೂ ಶೇರ್ ಮಾಡಿಕೊಂಡಿದ್ದರು. ಅದು ಇಲ್ಲಿದೆ: #😞 ಮೂಡ್ ಆಫ್ ಸ್ಟೇಟಸ್ #🆕ಲೇಟೆಸ್ಟ್ ಅಪ್ಡೇಟ್ಸ್ 📰 #🍿ಸ್ಯಾಂಡಲ್ ವುಡ್ #📰ಇಂದಿನ ಅಪ್ಡೇಟ್ಸ್ 📲